ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ ಅಕ್ಟೋಬರ್ 5ಕ್ಕೆ ಮುಂದೂಡಿಕೆ
ಪಾಕಿಸ್ತಾನ್ : ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಕುರಿತ ಪ್ರಕರಣದ ವಿಚಾರಣೆಯನ್ನು ಪಾಕಿಸ್ತಾನ ಹೈ ಕೋರ್ಟ್ ಅಕ್ಟೋಬರ್ 5ಕ್ಕೆ ಮುಂದೂಡಿದೆ. ಕುಲಭೂಷಣ್ ಜಾಧವ್ ಪರ ವಾದ ಮಂಡಿಸಲು ವಕೀಲರನ್ನು ನೇಮಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಇಸ್ಲಾಮಾಬಾದ್ ಹೈಕೋರ್ಟ್ ಅಕ್ಟೋಬರ್ 5ಕ್ಕೆ ಮುಂದೂಡಿದೆ ಎನ್ನಲಾಗಿದೆ.
ಪಾಕಿಸ್ತಾನದ ಅಟಾರ್ನಿ ಜನರಲ್ ಖಾಲೀದ್ ಜಾವೇದ್ ಖಾನ್ ಅವರು ಕುಲಭೂಷಣ್ ಜಾದವ್ ಪರವಾಗಿ ವಕೀಲರನ್ನು ನೇಮಿಸುವಂತೆ ಕೋರಿ ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಅಥರ್ ಮಿನಾಲಾ, ಅಮರ್ ಫಾರೂಕ್ ಮತ್ತು ಮಿಯಾಂಗುಲ್ ಹಸನ್ ಔರಂಗಜೇಬ್ ಅವರನ್ನೊಳಗೊಂಡ ಪೀಠವು, ಮೇ 7ರಂದು ನಡೆದ ವಿಚಾರಣೆ ವೇಳೆ ಜೂನ್ 15ರೊಳಗೆ ಜಾಧವ್ ಪರ ವಾದ ಮಂಡಿಸಲು ವಕೀಲರನ್ನು ನೇಮಿಸುವಂತೆ ಸೂಚಿಸಿತ್ತು.
ಈ ಸಂಬಂಧ ಅಕ್ಟೋಬರ್ 5ರಂದು ವಿಚಾರಣೆ ನಡೆಸುವುದಾಗಿ ಇಸ್ಲಾಮಾಬಾದ್ ಹೈಕೋರ್ಟ್ ಹೇಳಿದೆ. ಜೊತೆಗೆ ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಭಾರತೀಯ ಹೈಕಮಿಷನ್ ನ ವಕೀಲರಿಗೂ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








