ಈ ವರ್ಷ ಹಜ್ ಯಾತ್ರೆಯ ಎಲ್ಲ ಅರ್ಜಿಗಳು ರದ್ದು
ನವದೆಹಲಿ : ಕೋವಿಡ್ ಮಹಾಮಾರಿಯ ಕಾರಣದಿಂದಾಗಿ ಈ ವರ್ಷ ಪವಿತ್ರ ಹಜ್ ಯಾತ್ರೆಗಾಗಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನು ರದ್ದುಗೊಳಿಸಲಾಗಿದೆ ಎಂದು ಭಾರತೀಯ ಹಜ್ ಸಮಿತಿ
ತಿಳಿಸಿದೆ. ಇತ್ತೀಚೆಗೆ ಕೋವಿಡ್ ಅಲೆಯಿಂದಾಗಿ ವಿದೇಶಿಗರಿಗೆ ಹಜ್ ಯಾತ್ರೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸೌದಿ ಅರೇಬಿಯಾ ನಿರ್ಧಾರ ತೆಗೆದುಕೊಂಡ ಬಗ್ಗೆ ಘೋಷಿಸಿದ ಬೆನ್ನಲ್ಲೇ ಹಜ್ ಯಾತ್ರೆಗೆ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನ ರದ್ದುಪಡಿಸಲಾಗಿದೆ. ಈ ಬಗ್ಗೆ ಸಮಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಕ್ಸೂದ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಅಲ್ಲದೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ‘ಹಜ್ ಯಾತ್ರೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ, ತನ್ನ ಪ್ರಜೆಗಳನ್ನು ಹೊರತುಪಡಿಸಿ ಇತರ ದೇಶಗಳ ಜನರಿಗೆ ಯಾತ್ರೆ ಕೈಗೊಳ್ಳಲು ಅನುಮತಿ ನೀಡುವುದಿಲ್ಲ ಎಂದು ಸೌದಿ ಅರೇಬಿಯಾ ಹೇಳಿದೆ. ಕೋವಿಡ್ ಪಿಡುಗಿನ ಈ ಸಂದರ್ಭದಲ್ಲಿ ಇದು ಒಳ್ಳೆಯ ನಿರ್ಧಾರ’ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹಜ್ ಯಾತ್ರೆಯ ಬಗ್ಗೆ ವಿವರಣೆ :
ಇಸ್ಲಾಂ ಧರ್ಮದ ಪಂಚ ಆದ್ಯ ಕರ್ತವ್ಯಗಳಲ್ಲಿ ಹಜ್ ಯಾತ್ರೆ ಕೈಗೊಳ್ಳುವುದು ಅತ್ಯಂತ ಪ್ರಮುಖವಾದ ಕರ್ತವ್ಯವೆಂದು ನಂಬಲಾಗುತ್ತದೆ. ಪ್ರತಿಯೊಬ್ಬ ಮುಸ್ಲಿಂ ಭಕ್ತಾಧಿಯು ತಮ್ಮ ಜೀವಮಾನದಲ್ಲಿ ಒಮ್ಮೆಯಾದರೂ ಸಹ ಹಜ್ ಯಾತ್ರೆಯನ್ನು ಕೈಗೊಳ್ಳುವ ಅಭಿಲಾಷೆಯನ್ನು ಹೊಂದಿರುತ್ತಾರೆ. ಇಸ್ಲಾಂ ಧರ್ಮದ ದಿವ್ಯ 5 ಆಚರಣೆಗಳಲ್ಲಿ ಹಜ್ ಯಾತ್ರೆಯು ಅತ್ಯಂತ ಪ್ರಮುಖವಾಗಿರುವುದರಿಂದ ಸಬಲರಾಗಿರುವ ಪ್ರತಿಯೊಬ್ಬ ವ್ಯಕ್ತಿಗೆ ಜೀವಮಾನದಲ್ಲಿ ಒಮ್ಮೆಯಾದರೂ ಈ ಪವಿತ್ರ ಕಾರ್ಯವನ್ನು ತಪ್ಪದೆ ನಿರ್ವಹಿಸುವಂತೆ ತಿಳಿಸಲಾಗಿದೆ. ಪ್ರವಾದಿ ಮೊಹಮ್ಮದ್ ಪೈಗಂಬರ್ ರವರ ಜೀವನದರ್ಶನಕ್ಕೆ ಹೊಂದಿಕೊಂಡಿರುವಂತಹ ಈ ಹಜ್ ಯಾತ್ರೆಯ ಹಿನ್ನೆಲೆಯು ಪವಿತ್ರ ಯಾತ್ರಾ ಸ್ಥಳಗಳಾದ ಮಕ್ಕಾ-ಮದೀನ ನಗರಗಳ ದರ್ಶನ ಪಡೆಯುವ ಸಂಪ್ರದಾಯವಾಗಿದೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.