ರಾಜ್ಯದಲ್ಲಿ ಸಿಎಂ ಬದಲಾವಣೆ ಆದರೆ ರಾಜ್ಯಕ್ಕೆ ಉತ್ತಮ : ಶರಣಬಸಪ್ಪ
ಯಾದಗಿರಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ.
ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಆದ್ರೆ ರಾಜ್ಯಕ್ಕೆ ಉತ್ತಮ ಎಂದು ಕಾಂಗ್ರೆಸ್ ಶಾಸಕ ಶರಣಬಸಪ್ಪ ದರ್ಶನಾಪುರ ಕಿಡಿಕಾರಿದ್ದಾರೆ.
ಶಹಾಪೂರ ತಾಲೂಕಿನ ದೋರನಹಳ್ಳಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಆಗಿ ಬಿಎಸ್ ಯಡಿಯೂರಪ್ಪ ಅವರಿಗೆ ಆಡಳಿತ ನಡೆಸಲು ಆಗುತ್ತಿಲ್ಲ.
ಅವರ ಬದಲಾಗಿ ಸಿಎಂ ಪುತ್ರ ಆಡಳಿತ ನಡೆಸುತ್ತಿದ್ದಾರೆ. ಅವರಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ, ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಆದರೆ ರಾಜ್ಯಕ್ಕೆ ಉತ್ತಮವಾಗಿದೆ ಎಂದು ಸದ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.
ಇದೇ ವೇಳೆ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಇಂಧನ ಬೆಲೆ ಜಾಸ್ತಿ ಆದಂತೆ ಎಲ್ಲಾ ಸರಕು ಮತ್ತು ಸೇವೆಗಳ ಬೆಲೆ ಜಾಸ್ತಿಯಾಗುತ್ತದೆ. ಹೀಗಾಗಿ ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ತರಬೇಕು ಎಂದು ಆಗ್ರಹಿಸಿದರು.









