ಸಿಎಂ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಹೇಳಿದ್ದೇನು..?
ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಅದರಲ್ಲೂ ಸಿಎಂ ಬದಲಾವಣೆ ವಿಚಾರ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವಾಗಲೇ ಅರುಣ್ ಸಿಂಗ್ ರ ಭೇಟಿ ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ.
ಹೈ ಕಮಾಂಡ್ ನಿರ್ದೇಶನದ ಮೇರೆಗೆ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಬದಲಾವಣೆ ಕುರಿತು ನನಗೆ ಎಷ್ಟು ತಿಳಿದಿದೆಯೋ ಅಷ್ಟನ್ನೂ ಹೇಳಿದ್ದೇನೆ. ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. ಈ ಬಗ್ಗೆ ಮುಂದೆ ನಿಮಗೆ ತಿಳಿಸುತ್ತೇನೆ ಎಂದರು.
ಮುಂದುವರೆದು ಕಾಂಗ್ರೆಸ್, ಜೆಡಿಎಸ್ ವಿರುದ್ಧ ಕಿಡಿಕಾರಿದ ಅರುಣ್ ಸಿಂಗ್, ಕೋವಿಡ್ ಸಂಕಷ್ಟ ಕಾಲದಲ್ಲಿ ಕಾರ್ಯಕರ್ತರು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ.
ತಮ್ಮ ಜೀವವನ್ನು ಲೆಕ್ಕಿಸದೆ, ಸಾರ್ವಜನಿಕರ ಸೇವೆ ಮಾಡಿದ್ದಾರೆ, ಸೇವೆಯೇ ಸಂಘಟನೆ ಎಂಬ ಮನೋಭಾವದಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ.
ಆದರೆ ಇಂತಹ ಕಠಿಣ ಪರಿಸ್ಥಿತಿಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ಜೆಡಿಎಸ್ ನವರು ಇಂತಹ ಸಂದರ್ಭದಲ್ಲಿ ಕ್ವಾರಂಟೈನ್ ನಲ್ಲಿ ಉಳಿದಿದ್ದಾರೆ ಎಂದು ವ್ಯಂಗ್ಯವಾಡಿದರು.









