ಯಡಿಯೂರಪ್ಪ ಅವರನ್ನು ಟಚ್ ಮಾಡಿದರೆ ಕರ್ನಾಟಕಕ್ಕೆ ಬೆಂಕಿ : ಸುಲಫಲ ಮಠದ ಶ್ರೀ
ಕಲಬುರಗಿ : ಯಡಿಯೂರಪ್ಪ ಅವರನ್ನು ಟಚ್ ಮಾಡಿದರೆ ಕರ್ನಾಟಕಕ್ಕೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಸುಲಫಲ ಮಠದ ಸಾರಂಗಧರ ಸ್ವಾಮೀಜಿ ಕೂಡ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇನ್ನೊಂದೆಡೆ ರಾಜ್ಯದ ಮಠಾಧೀಶರು ದೊಡ್ಡ ಸಂಖ್ಯೆಯಲ್ಲಿ ಯಡಿಯೂರಪ್ಪನವರ ಪರ ನಿಂತು ಬ್ಯಾಟ್ ಬೀಸುತ್ತಿದ್ದಾರೆ.
ಇದೇ ವೇಳೆ ಕಲಬುರಗಿಯಲ್ಲಿ ಸುಲಫಲ ಮಠದ ಸಾರಂಗಧರ ಮಹಾಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಯಡಿಯೂರಪ್ಪ ಅವರನ್ನು ಟಚ್ ಮಾಡಿದರೆ ಕರ್ನಾಟಕಕ್ಕೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಗುಡುಗಿದ್ದಾರೆ.
ಯಡಿಯೂರಪ್ಪ ಕೇವಲ ಲಿಂಗಾಯತ ಸಮುದಾಯದ ನಾಯಕರಲ್ಲ, ಅವರು ಸರ್ವ ಜನಾಂಗದ ನಾಯಕರು. 40 ವರ್ಷಗಳ ಕಾಲ ಸತತ ಹೋರಾಟ ಮಾಡಿ ಸಿಎಂ ಆಗಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಯಡಿಯೂರಪ್ಪನವರು ಮುಖ್ಯಮಂತ್ರಿ ಖುರ್ಚಿಗೆ ಅಂಟಿಕೊಂಡಿಲ್ಲ. ಬದಲಾಗಿ ಸಿಎಂ ಹುದ್ದೆಯೇ ಅವರನ್ನು ಹುಡುಕಿಕೊಂಡು ಬಂದಿದೆ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದರೆ ಬಿಜೆಪಿ ಸರ್ವನಾಶವಾಗುವುದು ಪಕ್ಕಾ ಎಂದು ಭವಿಷ್ಯ ನುಡಿದಿದ್ದಾರೆ.