ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಹೊಸದಾಗಿ 7 ಕೊರೊನಾ ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 415 ಕ್ಕೆ ಏರಿಕೆಯಾದಂತಾಗಿದೆ. ಅಲ್ಲದೇ ಕಲಬುರ್ಗಿಯಲ್ಲಿ 80 ವರ್ಷದ ಓರ್ವ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೊರೊನಾದಿಂದ ಒಟ್ಟು 17 ಜನರು ಸಾವನ್ನಪ್ಪಿದ್ದು, ಒಟ್ಟು 114 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು ಜಿಲ್ಲಾವಾರು ಸೋಂಕಿತರನ್ನು ಗಮನಿಸುವುದಾದರೆ ಇಂದು ಪತ್ತೆಯಾದ 7 ಜನರಲ್ಲಿ ತಲಾ ಮೂವರು ವಿಜಯಪುರ ಹಾಗೂ ಕಲಬುರಗಿಯವರಾಗಿದ್ದಾರೆ. ಒಬ್ಬ ವ್ಯಕ್ತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಇದರಲ್ಲಿ ಮೂವರು ಪುರುಷರು ಹಾಗೂ ನಾಲ್ವರು ಮಹಿಳೆಯರು ಸೇರಿದ್ದಾರೆ.
ಆದ್ರೆ, ಈ ನಡುವೆ ಇಂದೂ ರಾಜ್ಯ ರಾಜಧಾನಿ ಬೆಂಗಳೂರಿಗರಿಗೆ ಕೊಂಚ ರಿಲೀಫ್ ಸಿಕ್ಕಿದ್ದು, ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ.








