ಕೊರೊನಾ ರಿಪೋರ್ಟ್ Corona Report : ಕಳೆದ 24 ಗಂಟೆಗಳಲ್ಲಿ 67,208 ಮಂದಿಗೆ ಸೋಂಕು
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದ್ದು, ಕಳೆದ 24 ಗಂಟೆಗಳಲ್ಲಿ 67,208 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,26,740ಕ್ಕೆ ಇಳಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,208 ಕೊರೊನಾ ಕೇಸ್ ಗಳು ಪತ್ತೆಯಾಗುತ್ತಿದ್ದು, ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 2,97,00,313ಕ್ಕೆ ಏರಿಕೆಯಾಗಿದೆ.
ಇದೇ ಅವಧಿಯಲ್ಲಿ 2,330 ಮಂದಿ ಮೃತಪಟ್ಟಿದ್ದು, ಈ ಮೂಲಕ ಒಟ್ಟು ಮೃತರ ಸಂಖ್ಯೆ 3,81,903ಕ್ಕೆ ಏರಿದೆ. ದೇಶದಲ್ಲಿನ್ನೂ 8,26,740 ಸಕ್ರಿಯ ಪ್ರಕರಣಗಳಿವೆ.
ಈವರೆಗೆ 2,84,91,670 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಒಟ್ಟು 26,55,19,251 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.










