ಯಡಿಯೂರಪ್ಪನವರಿಗೆ ವಯಸ್ಸಾಗಿದೆ, ಸ್ಪಿರಿಟ್ ಇಲ್ಲ : ಹೆಚ್.ವಿಶ್ವನಾಥ್
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ವಯಸ್ಸಾಗಿದೆ, ಸ್ಪಿರಿಟ್ ಇಲ್ಲ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
ನಾಯಕತ್ವದ ಬದಲಾವಣೆ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ, ನಾನು ಅರುಣ್ ಸಿಂಗ್ ಭೇಟಿ ಮಾಡಿದೆ.
ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳ ವಸ್ತುಸ್ಥಿತಿ ಹೇಳಿದ್ದೇನೆ. ನಮಗೆ ಮಂತ್ರಿಗಿರಿ ಸಿಕ್ಕಿಲ್ಲ ಅನ್ನೋ ಬೇಸರವಿಲ್ಲ. ಈ ಬಗ್ಗೆ ನಾನು ದೂರುತ್ತಿಲ್ಲ.
ಅರುಣ್ ಸಿಂಗ್ ಅವರಿಗೆ ಪಕ್ಷದ ವಸ್ತುಸ್ಥಿತಿಯನ್ನು ಆಳವಾಗಿ ತಿಳಿಸಿದ್ದೇನೆ. ನಾನು ಯಾರ ಬಣವೂ ಅಲ್ಲ, ಯಾರ ವಿರುದ್ಧವೂ ಅಲ್ಲ. ಯಡಿಯೂರಪ್ಪಗೆ ವಯಸ್ಸಾಗಿದೆ, ಸ್ಪಿರಿಟ್ ಇಲ್ಲ.
ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ಇದ್ದು, ರಾಕ್ಷಸ ರಾಜಕಾರಣ ಇಲ್ಲೂ ಕಾಣ್ತಿದ್ದೇವೆ. ಯಡಿಯೂರಪ್ಪ ಮಾಡಿದ ಕೆಲಸಗಳ ಬಗ್ಗೆ ಗೌರವ ಇದೆ. ಆದರೂ ಇವತ್ತಿನ ಪ್ರಶ್ನೆ ಯಡಿಯೂರಪ್ಪ ಬಗ್ಗೆ ಅಲ್ಲ ಎಂದು ತಿಳಿಸಿದರು.
ಇದೇ ವೇಳೆ ರಾಜೀನಾಮೆಗೆ ಸಿದ್ಧ ಎಂಬ ಬಿಎಸ್ ವೈ ಹೇಳಿಕೆ ಬಗ್ಗೆ ಮಾತನಾಡಿ, ಹೈಕಮಾಂಡ್ ಎಸ್ ಅಂದ್ರೆ ರಾಜೀನಾಮೆಗೆ ಸಿದ್ಧ ಅಂತ ಖುದ್ದು ಬಿಎಸ್ ವೈ ಅವರೇ ಹೇಳಿದ್ದಾರೆ.
ಆ ಪ್ರಕಾರ ಆಗಿ ಅವರು ಪಕ್ಷದಲ್ಲಿ ಮಾರ್ಗದರ್ಶಕರಾಗಿ ಮುಂದುವರಿಯಲಿ. ವೀರಶೈವ ಲಿಂಗಾಯತ ಸಮುದಾಯದ ಮತ್ತೊಬ್ಬ ನಾಯಕನಿಗೆ ಅವಕಾಶ ಮಾಡಿಕೊಡಲಿ ಎಂದು ಮನವಿ ಮಾಡಿಕೊಂಡರು.
ಇನ್ನು ಮಠಾಧೀಶರು ಸಿಎಂ ಬದಲಾವಣೆ ಬಗ್ಗೆ ಮಾತನಾಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ ವಿಶ್ವನಾಥ್, ಮಠಾಧಿಪತಿಗಳು ಬಸವತತ್ವ ಮೀರಿ ಹೋಗಬಾರದು.
ಇನ್ನೊಬ್ಬ ಲಿಂಗಾಯತರನ್ನೇ ಮುಖ್ಯಮಂತ್ರಿ ಮಾಡಿ. ಪಂಚಮಸಾಲಿಸಮುದಾಯದವರನ್ನೇ ಸಿಎಂ ಮಾಡಲಿ. ಅವರಿಗೊಂದು ಅವಕಾಶ ಕೊಡಲಿ. ಲಿಂಗಾಯತ ಮಠಾಧೀಶರಿಗೆ ಎಂದರು.









