‘ಸಿದ್ದರಾಮಯ್ಯ Siddaramaiah ಬಾಹುಬಲಿ, ಡಿಕೆಶಿ ಕಟ್ಟಪ್ಪ’ : ಶ್ರೀ ರಾಮುಲು
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಶ್ರೀರಾಮುಲು ಅವರು ಬಾಹುಬಲಿ- ಕಟ್ಟಪ್ಪಗೆ ಹೋಲಿಕೆ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ ನಾನೇ ಬಾಹುಬಲಿ ಅಂತ ಹೋಗ್ತಿದ್ದಾರೆ. ಆದರೆ ಹಿಂದೆ ಡಿಕೆ ಶಿವಕುಮಾರ್ ಕಟ್ಟಪ್ಪ ರೀತಿ ಖಡ್ಗ ಹಿಡಿದು ಹೋಗ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ಅಲ್ಲದೆ ಕಾಂಗ್ರೆಸ್ ಅಧಿಕಾರಕ್ಕಾಗಿ ಷಡ್ಯಂತ್ರ ಮಾಡುತ್ತಿದೆ. ಇದರ ಬಗ್ಗೆ ಅರುಣ್ ಸಿಂಗ್ ಅವರ ಬಳಿ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿ, ನಾಯಕತ್ವ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ನಮ್ಮ ಪಾರ್ಟಿಯಲ್ಲಿ ಪಾರ್ಲಿಮೆಂಟರಿ ಬೋರ್ಡ್ ಇದೆ. ಅವರು ನಿರ್ಧಾರ ಮಾಡಿದರೆ ಮುಗಿಯಿತು.
ಯಾವುದೇ ಗೊಂದಲಗಳಿಲ್ಲ. ಯಾವುದೇ ತೀರ್ಮಾನ ಇದ್ದರೂ ಹೈಕಮಾಂಡ್ ನಿರ್ಧರಿಸುತ್ತೆ. ಸುಮ್ಮನೆ ಗೊಂದಲ ಮೂಡಿಸುವುದು ಸರಿಯಲ್ಲ ಎಂದು ಹೇಳಿದರು.









