ದಕ್ಷಿಣ ಕನ್ನಡದಲ್ಲಿ ಮತ್ತೊಂದು ಕೊರೊನಾ ವೈರಸ್ ಪ್ರಕರಣ ದೃಢಪಟ್ಟಿದ್ದು ಸದ್ದಿಲ್ಲದೆ ಲಕ್ಷಣ ರಹಿತವಾಗಿ ಕೊರೊನಾ ಮಹಾಮಾರಿ ಜಿಲ್ಲೆಯನ್ನು ಅವರಿಸುತ್ತಿದೆಯೇ ಎಂಬ ಆತಂಕ ಉಂಟಾಗಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಏಪ್ರಿಲ್ 18 ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ 67ವರ್ಷದ ಮಹಿಳೆಯ ಗಂಟಲಿನ ದ್ರವ ಪರೀಕ್ಷೆಯ ವರದಿ ಇಂದು ಬಂದಿದ್ದು, ಸೋಂಕು ತಗುಲಿರುವುದು ಖಚಿತವಾಗಿದೆ.
ಬಂಟ್ವಾಳದ ತಾಲೂಕಿನ ಕಸ್ಬಾ ಗ್ರಾಮದ ನಿವಾಸಿಯಾಗಿರುವ ಇವರು ಏಪ್ರಿಲ್ 19ರಂದು ಕೊರೊನಾ ಸೋಂಕಿನಿಂದ ಮೃತಪಟ್ಟ (ಬಂಟ್ವಾಳದ ಕಸ್ಬಾ ರೋಗಿ-360 ) ಮಹಿಳೆಯ ನೆರೆಮನೆಯವರಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16ಕ್ಕೆ ಏರಿದ್ದು ಇದರಲ್ಲಿ 3 ಸಕ್ರಿಯ ಪ್ರಕರಣಗಳಾಗಿದೆ.
ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಹಗಲಿರುಳು ಶ್ರಮಿಸುತ್ತಿದ್ದರೂ ಯಾವುದೇ ಆರಂಭಿಕ ಲಕ್ಷಣಗಳಿಲ್ಲದೆ ಸೋಂಕು ಪೀಡಿತರು ಪತ್ತೆಯಾಗುತ್ತಿರುವುದು ಹೊಸ ತಲೆ ನೋವಾಗಿ ಪರಿಣಮಿಸಿದೆ.
ಸೋಂಕು ಹರಡದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ವ ಮುನ್ನೆಚ್ಚರಿಕೆ ವಹಿಸಿಕೊಂಡಾಗ ಮಾತ್ರ ಕೊರೊನಾ ಮಹಾಮಾರಿಯಿಂದ ದೂರವಿರಲು ಸಾಧ್ಯ ಎನ್ನುವ ಪ್ರಜ್ಞೆ ಪ್ರಸ್ತುತ ಸನ್ನಿವೇಶದಲ್ಲಿ ಪ್ರತಿಯೊಬ್ಬರಲ್ಲೂ ಮೂಡಬೇಕಿದೆ.
ಅರವಿಂದ ಅವೇಂಜರ್ಸ್ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








