ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ – ಟೀಮ್ ಇಂಡಿಯಾ ಅಂತಿಮ 11ರ ಬಳಗ ಹೀಗಿದೆ..!
ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ಇಂಗ್ಲೆಂಡ್ ನ ಸೌತಾಂಪ್ಟನ್ ನಲ್ಲಿ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಹೋರಾಟ ನಡೆಸಲಿವೆ.
ಈಗಾಗಲೇ ಟೀಮ್ ಇಂಡಿಯಾದ 11ರ ಬಳಗವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ ಆರ್. ಅಶ್ವಿನ್ ಮತ್ತು ರವೀಂದ್ರ ಜಡೇಜಾ ಇಬ್ಬರು ಸ್ಪಿನ್ನರ್ ಗಳು ಕಣಕ್ಕಿಳಿಯಲಿದ್ದಾರೆ. ಅದೇ ರೀತಿ ಜಸ್ಪ್ರಿತ್ ಬೂಮ್ರಾ, ಮಹಮ್ಮದ್ ಶಮಿ ಮತ್ತು ಇಶಾಂತ್ ಶರ್ಮಾ ವೇಗದ ಬೌಲಿಂಗ್ ವಿಭಾಗವನ್ನು ನೋಡಿಕೊಳ್ಳಲಿದ್ದಾರೆ.
ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಅವರು ತಂಡದ ಇನಿಂಗ್ಸ್ ಆರಂಭಿಸಲಿದ್ದಾರೆ.. ಚೇತೇಶ್ವರ ಪೂಜಾರ, ನಾಯಕ ವಿರಾಟ್ ಕೊಹ್ಲಿ, ಉಪನಾಯಕ ಅಜಿಂಕ್ಯಾ ರಹಾನೆ ಮತ್ತು ವಿಕೆಟ್ ಕೀಪರ್ ರಿಷಬ್ ಪಂತ್ ಅವರು ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಧಾರವಾಗಲಿದ್ದಾರೆ.
ಟೀಮ್ ಇಂಡಿಯಾದ 11ರ ಬಳಗ
ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯಾ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ರಿಷಬ್ ಪಂತ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಮಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರಿತ್ ಬೂಮ್ರಾ.








