ಯಡಿಯೂರಪ್ಪನವರಿಗೆ ಮೊದಲಿದ್ದ ಶಕ್ತಿ ಈಗಿಲ್ಲ : ಹೆಚ್.ವಿಶ್ವನಾಥ್
ಬೆಂಗಳೂರು : 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರ ಬೇಡ ಎಂಬ ಪಕ್ಷದ ಸಿದ್ಧಾಂತವನ್ನು ಪಾಲಿಸುವ ಬಗ್ಗೆ ಪ್ರಸ್ತಾಪಿಸಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮೊದಲಿದ್ದ ಶಕ್ತಿ ಈಗ ಇಲ್ಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ಜನರದ್ದು, ಯಾವುದೇ ಕುಟುಂಬಕ್ಕೆ ಸೇರಿಲ್ಲ. 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರ ಬೇಡ ಎಂಬ ಪಕ್ಷದ ಸಿದ್ಧಾಂತವನ್ನು ಪಾಲಿಸುವ ಬಗ್ಗೆ ಪ್ರಸ್ತಾಪಿಸಿದ್ದೇನೆ.
ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮೊದಲಿದ್ದ ಶಕ್ತಿ ಈಗ ಇಲ್ಲವಾಗಿದೆ. ಅವರ ಕುಟುಂಬದವರ ಹಸ್ತಕ್ಷೇಪವಿಲ್ಲ ಎನ್ನುವುದನ್ನು ನಾನು ಹೇಳುತ್ತಿಲ್ಲ, ಸಚಿವರೇ ಹೇಳುತ್ತಿದ್ದಾರೆ. ರಾಜ್ಯದ ಜನತೆಗೆ ಗೊತ್ತಿದೆ ಎಂದು ಸಿಎಂ ಕುಟುಂಬ ರಾಜಕಾರಣ ವಿರುದ್ಧ ಗರಂ ಆದರು.
ಇನ್ನು ಯಡಿಯೂರಪ್ಪ ಮತ್ತೆ ಜೈಲಿಗೆ ಹೋಗುತ್ತಾರೆ ಎಂಬ ಆತಂಕ ನಮ್ಮದು ಎಂದ ಹೆಚ್ ವಿಶ್ವನಾಥ್, ವಿಧಾನಸೌಧ ಶಕ್ತಿಪೀಠ ಮಸುಕಾಗುತ್ತಿದೆ.
ನಾಯಕತ್ವ ಕುಸಿಯುತ್ತಿದೆ. ಅವರಿಂದ ಪ್ರಯೋಜನ ಇಲ್ಲವಾಗಿದೆ ಎಂದು ಗರಂ ಆದರು. ಅಲ್ಲದೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಎಲ್ಲಾ ಸಚಿವರ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ.
ಇಂತಹ ನಾಯಕತ್ವದಿಂದ ಪ್ರಯೋಜನವಿಲ್ಲ. ಯಡಿಯೂರಪ್ಪ ಅವರನ್ನು ಗೌರವಿಸಿ ಸಿಎಂ ಮಾಡಿದ್ದೇವೆ. ನಮ್ಮ ಸಹಕಾರದಿಂದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈಗ ಸಮರ್ಪಕವಾದ ನಾಯಕತ್ವ ಬೇಕಿದೆ ಎಂದು ವಾಗ್ದಾಳಿ ನಡೆಸಿದರು.










