ಜೂನ್ 21 ರಿಂದ ಅನ್ ಲಾಕ್ 2.0 : ಯಾವುದಕ್ಕೆ ಅನುಮತಿ..?
ಬೆಂಗಳೂರು : ಸೋಮವಾರದಿಂದ ರಾಜ್ಯದಲ್ಲಿ ಅನ್ ಲಾಕ್ 2.0 ಪ್ರಕ್ರಿಯೆ ಆರಂಭವಾಗಲಿದೆ.
ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಅನ್ ಲಾಕ್ ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿನ್ನೆಲೆಯಲ್ಲಿ ಇಂದು ಸಂಜೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವರ ಜೊತೆ ಸಭೆ ನಡೆಸಲಿದ್ದು, ರಾಜ್ಯದಲ್ಲಿ 2 ನೇ ಅನ್ ಲಾಕ್ ಡೌನ್ ಘೋಷಣೆ ಮಾಡಲಿದ್ದಾರೆ.
ಯಾವುದೆಕ್ಕೆಲ್ಲಾ ಅವಕಾಶ..?
ಶೇ. 50 ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರ ಆರಂಭ
ಹೋಟೆಲ್,ಮಾರುಕಟ್ಟೆ, ಕ್ಷೌರದಂಗಡಿಗಳು ಹಾಗೂ ಮದುವೆ ಸಮಾರಂಭಕ್ಕೆ 50 ಜನರಿಗೆ ಅವಕಾಶ
ಬಟ್ಟೆ ಅಂಗಡಿ, ಚಿನ್ನದಂಗಡಿ ಸೇರಿದಂತೆ ಎಲ್ಲಾ ಬಗೆಯ ವಾಣಿಜ್ಯ ಮಳಿಗೆಗಳು ಅವಕಾಶ
ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶೇ.50 ರಷ್ಟು ಗ್ರಾಹಕರಿಗೆ ಪ್ರವೇಶ ಅವಕಾಶ
ಯಾವುದಕ್ಕೆ ಅನುಮತಿ ಇಲ್ಲ..!
ಚಿತ್ರಮಂದಿರಗಳು, ಪಬ್, ಬಾರ್, ಜಿಮ್, ಸ್ವಿಮ್ಮಿಂಗ್ ಪೂಲ್, ಕ್ರೀಡಾಂಗಣಗಳು ಬಂದ್
ಶಾಲಾ ಕಾಲೇಜು ಬಂದ್
ಬಹಿರಂಗ ಸಮಾರಂಭಗಳು ಬಂದ್
ರಾಜ್ಯದಲ್ಲಿ ಸೋಂಕು ಪ್ರಮಾಣ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇನ್ನು ಒಂದು ವಾರ ಲಾಕ್ಡೌನ್ ಮುಂದುವರೆಯುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಸೆಮಿ ಲಾಕ್ ಡೌನ್ ಜಾರಿಯಲ್ಲಿರುತ್ತದೆ.









