ಅಧಿಕಾರಕ್ಕಾಗಿ ಕಿತ್ತಾಟದಲ್ಲೇ ಬಿಜೆಪಿ ನಾಯಕರು ಕಾಲಹರಣ : ಡಿಕೆಶಿ
ಬೆಂಗಳೂರು : ದುರಾಡಳಿತ, ಭ್ರಷ್ಟಾಚಾರ, ಅಧಿಕಾರಕ್ಕಾಗಿ ಕಿತ್ತಾಟದಲ್ಲೇ ಬಿಜೆಪಿ ನಾಯಕರು ಕಾಲಹರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಲೆಕ್ಕವನ್ನೂ ಸರ್ಕಾರಕ್ಕೆ ಸರಿಯಾಗಿ ಕೊಡಲಾಗುತ್ತಿಲ್ಲ.
ಸುಳ್ಳು ಲೆಕ್ಕಗಳನ್ನು ಕೊಟ್ಟು ಸಾವಿನ ಸಂಖ್ಯೆಯನ್ನೂ ಮುಚ್ಚಿಡಲಾಗುತ್ತಿದೆ. ಜನರು ಬದುಕಿಗಾಗಿ ಹೋರಾಟ ನಡೆಸಿದ್ದರೆ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ.
ರಾಜ್ಯದಲ್ಲಿ ಇಂದು ಜನರು ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ನರಕಯಾತನೆಗೆ ಕೊನೆಯಿಲ್ಲದಾಗಿದೆ. ಬಿಜೆಪಿ ಯುದ್ಧಕಾಂಡ ಜನರ ಕರ್ಮಕಾಂಡ ಎಂಬಂತಾಗಿದೆ ಪರಿಸ್ಥಿತಿ.
ದುರಾಡಳಿತ, ಭ್ರಷ್ಟಾಚಾರ, ಅಧಿಕಾರಕ್ಕಾಗಿ ಕಿತ್ತಾಟದಲ್ಲೇ ಬಿಜೆಪಿ ನಾಯಕರು ಕಾಲಹರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ಮೊದಲು ವಿಧಾನಮಂಡಲ ಅಧಿವೇಶನ ಕರೆಯಲಿ ರಾಜ್ಯದಲ್ಲಿ ಏನೇನು ನಡೆಯುತ್ತಿದೆ ಎಂಬುದರ ಬಗ್ಗೆ ಅಧಿವೇಶನದಲ್ಲಿ ವಿಸ್ತೃತ ಚರ್ಚೆ ನಡೆಸಬೇಕಿದೆ ಎಂದು ಒತ್ತಾಯಿಸಿದ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಬಗ್ಗೆ ಸರ್ಕಾರ ಸರಿಯಾಗಿ ಮಾಹಿತಿ ನೀಡದೇ ಸುಳ್ಳು ಲೆಕ್ಕ ನೀಡುತ್ತಿದೆ.
ಕೋವಿಡ್ ಸಾವಿನ ಲೆಕ್ಕವೇ ಸರಿಯಾಗಿ ಆಡಿಟ್ ಆಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರೇ ಆಡಿಟ್ ಮಾಡಲಿದ್ದಾರೆ ಎಂದರು.









