50% ಫಾರ್ಮುಲಾದಲ್ಲಿ ಬಸ್ ಸಂಚಾರಕ್ಕೆ ಸಿದ್ಧತೆ: ಸಾರಿಗೆ ಸಚಿವ
ಬೆಂಗಳೂರು : ರಾಜ್ಯದಲ್ಲಿ ಶೇಕಡ 50 ಮಾದರಿಯಲ್ಲಿ ಬಸ್ಸುಗಳ ಸಂಚಾರಕ್ಕೆ ಸಿದ್ಧತೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ್ ಸವದಿ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಅಲ್ ಲಾಕ್ ಪ್ರಕ್ರಿಯೆ ಆರಂಭವಾಗಿದ್ದು, ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ಸೋಮವಾರಕ್ಕೆ ಅಂತ್ಯವಾಗಲಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆಗಳು ಶುರುವಾಗಿವೆ.
ಎರಡನೇ ಹಂತದ ಅನ್ ಲಾಕ್ ನಲ್ಲಿ ಬಸ್ಸುಗಳ ಸಂಚಾರ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಶೇಕಡ 50 ಮಾದರಿಯಲ್ಲಿ ಬಸ್ಸುಗಳ ಸಂಚಾರಕ್ಕೆ ಸಿದ್ಧತೆ ಮಾಡಲಾಗಿದೆ.
ಇಂದು ಅನ್ ಲಾಕ್ ಮೀಟಿಂಗ್ ನಲ್ಲಿ ಸಿಎಂ ಒಪ್ಪಿಗೆ ಕೊಟ್ಟರೆ, ರಾಜ್ಯಾದ್ಯಂತ ಬಸ್ಸುಗಳ ಸಂಚಾರ ಆರಂಭ ಮಾಡುತ್ತೇವೆ ಎಂದರು.
ಅಲ್ಲದೆ ಸದ್ಯಕ್ಕಂತೂ ಶೇ 50 ರಷ್ಟು ಪ್ರಯಾಣಿಕರ ಪ್ರಯಾಣಕ್ಕೆ ತೀರ್ಮಾನಿಸಲಾಗಿದೆ.
ಮುಂದೆ ಲಾಕ್‍ಡೌನ್ ಮುಗಿದ ನಂತರ ಹಂತ ಹಂತವಾಗಿ ಹೆಚ್ಚುವರಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡುತ್ತೇವೆ ಎಂದು ಸವದಿಯವರು ತಿಳಿಸಿದ್ದಾರೆ.









