ನಾಳೆಯಿಂದ ಬಸ್ ಸಂಚಾರ ಆರಂಭ : ಕೋಡಿಹಳ್ಳಿ ಚಂದ್ರಶೇಖರ್ ಹೊಸ ಬಾಂಬ್
ಬೆಂಗಳೂರು : ಅನ್ ಲಾಕ್ 2.0 ನಲ್ಲಿ ಬಸ್ ಗಳ ಸಂಚಾರಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸರ್ಕಾರಕ್ಕೆ ಜುಲೈ 1ರವರೆಗೆ ಡೆಡ್ ಲೈನ್ ನೀಡಲಾಗಿದ್ದು, ಸಾರಿಗೆ ನೌಕರರ ಬೇಡಿಕೆಗಳಿಗೆ ಸ್ಪಂದಿಸದೇ ಇದ್ರೆ ಜುಲೈ 1 ರಿಂದ ಮತ್ತೆ ಸಾರಿಗೆ ಮುಷ್ಕರ ಆರಂಭಿಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಗುಡುಗಿದ್ದಾರೆ.
ಸರ್ಕಾರ ಕೊಟ್ಟ ಮಾತಿನಂತೆ ಆರನೇ ವೇತನ ಆಯೋಗ ಜಾರಿಗೆ ತರಬೇಕು. ಇಲ್ಲದಿದ್ದರೇ ಈ ಬಾರಿ ಸಾರಿಗೆ ನೌಕರರು ಅಷ್ಟೇ ಅಲ್ಲದೇ ಹೆಂಡತಿ, ಮಕ್ಕಳ ಜೊತೆಗೂಡಿ ಕುಟುಂಬ ಸಮೇತರಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ ಸರ್ಕಾರ ವಿಶೇಷವಾದ ಪ್ಯಾಕೇಜ್ ಕೊಟ್ಟು ಸಾರಿಗೆ ಇಲಾಖೆಯನ್ನು ಉಳಿಸುವ ಕೆಲಸ ಮಾಡಬೇಕು. ಜುಲೈ ಒಂದನೇ ತಾರೀಖಿನ ಒಳಗೆ ಸಭೆ ನಡೆಸಿ, ಮುಂದಿನ ಹೋರಾಟದ ರೂಪುರೇಷೆ ಮಾಡುತ್ತೇವೆ ಎಂದು ತಿಳಿಸಿದರು.
ಕಳೆದ ಬಾರಿ ಏಪ್ರಿಲ್ 7 ರಿಂದ 22 ರವರೆಗೆ 15 ದಿನ ಸಾರಿಗೆ ಪೆÇ್ರಟೆಸ್ಟ್ ನಡೆದಿತ್ತು. ನಂತರ ಹೈಕೋರ್ಟ್ ಮಧ್ಯೆ ಪ್ರವೇಶದಿಂದ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು.









