ದೇಶದಲ್ಲಿ ಒಟ್ಟು 29 ಕೋಟಿ ಡೋಸ್ ಲಸಿಕೆ ಪೂರೈಕೆ
ನವದೆಹಲಿ: ದೇಶಾದ್ಯಂದ ಕೋವಿಡ್ 2ನೇ ಅಲೆ ನಡುವೆ ಲಸಿಕೆ ಪೂರೈಕೆ ಕಾರ್ಯವು ಬಿರುಸು ಪಡೆದಿದ್ದು, ಇಲ್ಲಿಯವರೆಗೂ ದೇಶದಲ್ಲಿ 29 ಕೋಟಿಗೂ ಅಧಿಕ ಡೋಸ್ ಲಸಿಕೆಯನ್ನು ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ ಬರೋಬ್ಬರಿ 29,10,54,050 ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಉಚಿತವಾಗಿ ಪೂರೈಕೆ ಮಾಡಲಾಗಿದೆ. ಲಸಿಕೆ ವ್ಯರ್ಥವಾಗಿರುವುದು ಸೇರಿದಂತೆ ಇಲ್ಲಿಯ ತನಕ ಒಟ್ಟಾರೆಯಾಗಿ ದೇಶದಲ್ಲಿ 26,04,19,412 ಡೋಸ್ ಲಸಿಕೆ ಹಾಕಲಾಗಿದೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಬಾಕಿ ಇದೆ ಅವುಗಳನ್ನು ಕೆಲವೇ ದಿನಗಳಲ್ಲಿ ಹಾಕಲಾಗುವುದು.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪೂರೈಕೆ ಮಾಡಿರುವ ಒಟ್ಟಾರೆ ಲಸಿಕೆಯ ಪೈಕಿ ಇನ್ನೂ 3.06 ಕೋಟಿ ಡೋಸ್ ಲಸಿಕೆ ಬಾಕಿ ಇದೆ. ಇಂದು ಬೆಳಗ್ಗೆಯ ತನಕ 3,06,34638 ಲಸಿಕೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ದಾಸ್ತಾನು ಇದೆ ಎಂದು ಕೇಂದ್ರ ಸಚಿವಾಲಯ ತಿಳಿಸಿದೆ. ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮುಂದಿನ 3 ದಿನಗಳಲ್ಲಿ 24.53,080 ಡೋಸ್ ಲಸಿಕೆಯನ್ನು ಪೂರೈಕೆ ಮಾಡುವುದಾಗಿಯೂ ಮಾಹಿತಿ ನೀಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








