ಕೊರೊನಾದಿಂದ ಬಲಿಯಾದ ಕುಟುಂಬಕ್ಕೆ ಪರಿಹಾರ ಅಸಾಧ್ಯ – ಕೇಂದ್ರ ಸರ್ಕಾರ
ನವದೆಹಲಿ: ಕೊರೊನಾದಿಂದ ಬಲಿಯಾದವರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ನೀಡುವುದು ಅಸಾಧ್ಯ ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ಪಾವತಿ ಮತ್ತು ಕನಿಷ್ಠ ಮಾನದಂಡಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.
ಭೂಕಂಪನ, ಪ್ರವಾಹ ಮತ್ತಿತರ ನೈಸರ್ಗಿಕ ವಿಪತ್ತು ಸಂದರ್ಭಗಳಲ್ಲಿ ಮಾತ್ರ ಪರಿಹಾರ ಅನ್ವಯವಾಗಲಿದೆ ಎಂದು ವಿಪತ್ತು ನಿರ್ವಹಣಾ ಕಾನೂನಿನಲ್ಲಿ ಕಡ್ಡಾಯ ಮಾಡಿರುವುದರಿಂದ ಕೊರೊನಾದಿಂದ ಸಾವನ್ನಪ್ಪಿದ್ದವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೊರೊನಾ ಸಾಂಕ್ರಾಮಿಕ ಆರಂಭವಾದಾಗಿನಿಂದಲೂ ಸುಮಾರು 4 ಲಕ್ಷ ಜನರು ದೇಶದಲ್ಲಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಅಧಿಕೃತ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ.
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಮತ್ತೊಂದೆಡೆ ಲಾಕ್ ಡೌನ್ ನಿಂದಾಗಿ ಬಡವರು , ಸಿನಿಮಾ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ.. ಅನೇಕರು ಒಂದು ಹೊತ್ತಿನ ಊಟಕ್ಕೆ ಕಷ್ಟ ಪಡುವ ಪರಿಸ್ಥಿತಿ ಎದುರಾಗಿದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಉಪೇಂದ್ರ , ಪುನೀತ್ ರಾಜ್ ಕುಮಾರ್ , ಯಶ್, ದರ್ಶನ್, ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








