ADVERTISEMENT
Thursday, October 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡುವ ಗುರಿ: ಸಚಿವ ಡಾ.ಕೆ.ಸುಧಾಕರ್

admin by admin
June 21, 2021
in Newsbeat, State, ರಾಜ್ಯ
dr sudhakar cm bsy saakshatv
Share on FacebookShare on TwitterShare on WhatsappShare on Telegram

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡುವ ಗುರಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

dr sudhakar cm bsy saakshatvಬೆಂಗಳೂರು, ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Related posts

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

October 1, 2026
ಭ್ರಷ್ಟಾಚಾರದಲ್ಲಿ ವಿಜಯೇಂದ್ರ ಇಡೀ ದೇಶಕ್ಕೆ ಮಾಡೆಲ್: ವಿಜಯೇಂದ್ರ ರಾಜಕೀಯದಲ್ಲಿ ಇನ್ನೂ LKGಯಲ್ಲಿದ್ದು, ನಾನು ಪಿ ಹೆಚ್ ಡಿ ಮಾಡಿದ್ದೇನೆ-ಬಿ ಕೆ ಹರಿಪ್ರಸಾದ್

ಭ್ರಷ್ಟಾಚಾರದಲ್ಲಿ ವಿಜಯೇಂದ್ರ ಇಡೀ ದೇಶಕ್ಕೆ ಮಾಡೆಲ್: ವಿಜಯೇಂದ್ರ ರಾಜಕೀಯದಲ್ಲಿ ಇನ್ನೂ LKGಯಲ್ಲಿದ್ದು, ನಾನು ಪಿ ಹೆಚ್ ಡಿ ಮಾಡಿದ್ದೇನೆ-ಬಿ ಕೆ ಹರಿಪ್ರಸಾದ್

October 1, 2026

ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಲಸಿಕಾ ಮಹಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ನಂತರ ಮಾತನಾಡಿದ ಸಚಿವರು, ಅಂತಾರಾಷ್ಟ್ರೀಯ ಯೋಗ ದಿನದಂದೇ ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್ ಲಸಿಕೆ ಅಭಿಯಾನ ನಡೆಸಲು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಒಂದೇ ದಿನ ಸುಮಾರು 7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಇದೆ. 18-44 ವರ್ಷದವರಿಗೆ ಲಸಿಕೆ ಹಾಗೂ ಎರಡನೇ ಡೋಸ್ ಪಡೆಯುವವರಿಗೂ ಲಸಿಕೆ ನೀಡಲಾಗುತ್ತಿದೆ. ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದರು.

dr sudhakar cm bsy saakshatvಈ ವರ್ಷ ‘ಬಿ ವಿತ್ ಯೋಗ’, ‘ಯೋಗ ಫಾರ್ ವೆಲ್ ನೆಸ್’ ಎಂಬ ಘೋಷವಾಕ್ಯವಿದೆ. ದೊಡ್ಡ ಸಮಾರಂಭ ಇಟ್ಟುಕೊಳ್ಳದೆ ಕೋವಿಡ್ ಮಾರ್ಗಸೂಚಿ ಪಾಲಿಸಿ ಯೋಗ ದಿನ ಆಚರಿಸಲಾಗುತ್ತಿದೆ. ಯೋಗ ಕೇವಲ ದೈಹಿಕ ಮಾತ್ರವಲ್ಲದೆ, ಮಾನಸಿಕ, ಸಾಮಾಜಿಕ ಆರೋಗ್ಯಕ್ಕೆ ಅಗತ್ಯ. ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಇದನ್ನು ಪ್ರಸ್ತಾಪ ಮಾಡಿದ್ದು, ನಂತರ ಇಡೀ ಜಗತ್ತು ಯೋಗ ದಿನ ಆಚರಿಸುತ್ತಿದೆ ಎಂದರು.

ನಮ್ಮ ದೇಹ ರಥದಂತೆ ಎಂದು ಭಗವದ್ಗೀತೆಯಲ್ಲಿ ಹೇಳಲಾಗಿದೆ. ರಥದ ಕುದುರೆ ಇಂದ್ರಿಯ, ಸಾರಥಿ ಮನಸ್ಸು ಎನ್ನಲಾಗಿದೆ. ಮನಸ್ಸು ಸರಿ ಇದ್ದರೆ ಕುದುರೆಗಳು ಸರಿಯಾಗಿ ಓಡುತ್ತವೆ. ಇದೆಲ್ಲ ಸಾಧ್ಯವಾಗಲು ಯೋಗ ಮಾಡಬೇಕು. ಶ್ವಾಸಕೋಶಕ್ಕೆ ಉತ್ತಮ ವ್ಯಾಯಾಮವಾದ ಪ್ರಾಣಾಯಾಮ, ಧ್ಯಾನ ಮಾಡಬೇಕು. ಇದು ಕೇವಲ ಚಿಕಿತ್ಸೆ ಅಲ್ಲದೆ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ವಿಧಾನವಾಗಿದೆ ಎಂದರು.

1.86 ಕೋಟಿ ಲಸಿಕೆ

dr sudhakar cm bsy saakshatv15 ಲಕ್ಷಕ್ಕೂ ಅಧಿಕ ಕೋವಿಶೀಲ್ಡ್ ಹಾಗೂ 6-7 ಲಕ್ಷ ಕೋವ್ಯಾಕ್ಸಿನ್ ಲಸಿಕೆ ರಾಜ್ಯದಲ್ಲಿ ಸಂಗ್ರಹವಿದೆ. 1.86 ಕೋಟಿ ಜನರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ 13 ಸಾವಿರ ಲಸಿಕಾ ಕೇಂದ್ರಗಳಿವೆ. ಒಂದು ಕೇಂದ್ರದಲ್ಲಿ 70-80 ಜನರಿಗೆ ಲಸಿಕೆ ನೀಡಿದರೂ ನಾವು ಗುರಿ ಮುಟ್ಟಲು ಸಾಧ್ಯವಿದೆ. ಇದಕ್ಕೆ ಜನರ ಸಂಪೂರ್ಣ ಸಹಕಾರ ಬೇಕಿದೆ. ಸ್ಪುಟ್ನಿಕ್ ಲಸಿಕೆ ನೀಡಲು ಅನುಮತಿ ಇದ್ದು, ಈ ಲಸಿಕೆಯ ಲಭ್ಯತೆ ಬಗ್ಗೆ ನೋಡಬೇಕಿದೆ ಎಂದರು.

ಕೋವಿಡ್ ಲಸಿಕೆ ಬಗ್ಗೆ ರಾಜ್ಯದ ಜನರಿಗೆ ಹೆಚ್ಚು ಜಾಗೃತಿ ಇದೆ. ಆರಂಭಿಕ ಹಂತದಲ್ಲಿ ಕೆಲ ಪಕ್ಷಗಳು ಲಸಿಕೆ ಬಗ್ಗೆ ಜನರ ಮನಸ್ಸಿನಲ್ಲಿ ಅಂಜಿಕೆ ಉಂಟುಮಾಡಿದ್ದವು. ಆದರೆ ಕ್ರಮೇಣ ಜನರಿಗೆ ನಂಬಿಕೆ ಬಂದಿದೆ. ಲಸಿಕೆಯೊಂದೇ ಕೊರೊನಾ ನಿವಾರಣೆಗೆ ಸೂಕ್ತ ಪರಿಹಾರ ಎಂಬುದು ಅರಿವಾಗಿದೆ ಎಂದರು.

ಕೋವಿಡ್ ಸಂಬಂಧಿ ಅಂಕಿ ಅಂಶ ನೀಡುವಲ್ಲಿ ರಾಜ್ಯ ಮಾದರಿಯಾಗಿದೆ ಎಂದು ಕೇಂದ್ರ ಸರ್ಕಾರವೇ ಶ್ಲಾಘಿಸಿದೆ. ನಮ್ಮ ಸರ್ಕಾರ ಯಾವುದೇ ಮಾಹಿತಿ ಮುಚ್ಚಿಡುತ್ತಿಲ್ಲ. ಕಪ್ಪು ಶಿಲೀಂಧ್ರಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಬಿಡುಗಡೆಗೆ ಹೊಸ ಮಾರ್ಗಸೂಚಿಯನ್ನೂ ತರಲಾಗಿದೆ ಎಂದರು.

Tags: #saakshatvbengalurucm bsycovid karnatakaCOVID-19Dr. Sudhakarkarnataka govtMinister Dr sudhakar
ShareTweetSendShare
Join us on:

Related Posts

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

by Shwetha
October 1, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಿಕೆ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಗುತ್ತಿಗೆದಾರರ ಸಂಘದಿಂದ ಅತಿ ದೊಡ್ಡ ಸಂಕಷ್ಟ ಎದುರಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬಾಕಿ ಇರುವ...

ಭ್ರಷ್ಟಾಚಾರದಲ್ಲಿ ವಿಜಯೇಂದ್ರ ಇಡೀ ದೇಶಕ್ಕೆ ಮಾಡೆಲ್: ವಿಜಯೇಂದ್ರ ರಾಜಕೀಯದಲ್ಲಿ ಇನ್ನೂ LKGಯಲ್ಲಿದ್ದು, ನಾನು ಪಿ ಹೆಚ್ ಡಿ ಮಾಡಿದ್ದೇನೆ-ಬಿ ಕೆ ಹರಿಪ್ರಸಾದ್

ಭ್ರಷ್ಟಾಚಾರದಲ್ಲಿ ವಿಜಯೇಂದ್ರ ಇಡೀ ದೇಶಕ್ಕೆ ಮಾಡೆಲ್: ವಿಜಯೇಂದ್ರ ರಾಜಕೀಯದಲ್ಲಿ ಇನ್ನೂ LKGಯಲ್ಲಿದ್ದು, ನಾನು ಪಿ ಹೆಚ್ ಡಿ ಮಾಡಿದ್ದೇನೆ-ಬಿ ಕೆ ಹರಿಪ್ರಸಾದ್

by Shwetha
October 1, 2026
0

ಶಿಕಾರಿಪುರ: ಕರ್ನಾಟಕ ರಾಜಕಾರಣದಲ್ಲಿ ಹಿರಿಯ ಮತ್ತು ಕಿರಿಯ ನಾಯಕರ ನಡುವಿನ ಸಂಘರ್ಷ ಈಗ ಬೀದಿಗೆ ಬಂದಿದೆ. ಶಿಕಾರಿಪುರ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ...

ಕುಮಾರಸ್ವಾಮಿ ಆರೋಪಕ್ಕೆ ಡಿಕೆಶಿ ತಿರುಗೇಟು: ‘ನನ್ನ ₹1,400 ಕೋಟಿ ಆಸ್ತಿ ಕಾನೂನುಬದ್ಧವಾಗಿ ಸಂಪಾದಿಸಿದ್ದು’

ಕುಮಾರಸ್ವಾಮಿ ಆರೋಪಕ್ಕೆ ಡಿಕೆಶಿ ತಿರುಗೇಟು: ‘ನನ್ನ ₹1,400 ಕೋಟಿ ಆಸ್ತಿ ಕಾನೂನುಬದ್ಧವಾಗಿ ಸಂಪಾದಿಸಿದ್ದು’

by Shwetha
October 1, 2026
0

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಆಸ್ತಿ ಹಾಗೂ ನೈಸ್‌ ಯೋಜನೆಗೆ ಸಂಬಂಧಿಸಿದಂತೆ ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ...

ಕುಮಾರಸ್ವಾಮಿ ಹಫ್ತಾ ವಸೂಲಿ ಗಿರಾಕಿ ನಮ್ಮ ಬಳಿಯೂ ಇದೆ ಅವರ ಅಕ್ರಮಗಳ ಕೆಜಿಎಫ್-2 ಮತ್ತು ಕೆಜಿಎಫ್-3 ಫೈಲ್: ಸಚಿವ ಹೆಚ್ ಸಿ ಬಾಲಕೃಷ್ಣ

ಕುಮಾರಸ್ವಾಮಿ ಹಫ್ತಾ ವಸೂಲಿ ಗಿರಾಕಿ ನಮ್ಮ ಬಳಿಯೂ ಇದೆ ಅವರ ಅಕ್ರಮಗಳ ಕೆಜಿಎಫ್-2 ಮತ್ತು ಕೆಜಿಎಫ್-3 ಫೈಲ್: ಸಚಿವ ಹೆಚ್ ಸಿ ಬಾಲಕೃಷ್ಣ

by Shwetha
October 1, 2026
0

ರಾಮನಗರ: ನೈಸ್ ಯೋಜನೆ ವಿಚಾರವಾಗಿ ಡಿ ಕೆ ಶಿವಕುಮಾರ್ ವಿರುದ್ಧ ಸಮರ ಸಾರಿರುವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಚಿವ ಹೆಚ್ ಸಿ ಬಾಲಕೃಷ್ಣ ಅತ್ಯಂತ ಕಟುವಾದ...

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ: ಓರ್ವ ಸಾವು, 9 ಮಂದಿಗೆ ಗಾಯ; ಮನೀಶ್ ಮೃತದೇಹ ಪತ್ತೆ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ: ಓರ್ವ ಸಾವು, 9 ಮಂದಿಗೆ ಗಾಯ; ಮನೀಶ್ ಮೃತದೇಹ ಪತ್ತೆ

by Shwetha
October 1, 2026
0

ಮಂಗಳೂರು ಹೊರವಲಯದ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ಕೋಕರ್ ಹೈಡ್ರೋ ಟ್ರೀಟರ್ (CHT) ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram