ಯಾವುದೇ ಕಾರಣಕ್ಕೂ ಎಸ್ ಎಸ್ ಎಲ್ ಸಿ SSLC ಪರೀಕ್ಷೆ ಬೇಡ : ವಾಟಾಳ್ ನಾಗರಾಜ್
ಬೆಂಗಳೂರು ; ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಆತಂಕ ಹೆಚ್ಚಾಗುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದು ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ವಿಡಿಯೋ ಹೇಳಿಕೆ ರಿಲೀಸ್ ಮಾಡಿರುವ ವಾಟಾಳ್ ನಾಗರಾಜ್, ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ರದ್ದು ಮಾಡಿ ಎಂದು ಒತ್ತಾಯಿಸಿದ್ದಾರೆ.
ಅಲ್ಲದೆ ಯಾವುದೇ ಕಾರಣಕ್ಕೂ ಶಾಲೆ, ಕಾಲೇಜುಗಳನ್ನು ತೆರೆಯಕೂಡದು. ಮಕ್ಕಳ ವಿಚಾರದಲ್ಲಿ ಆಟವಾಡಬೇಡಿ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿಕೊಂಡಿದ್ದಾರೆ.









