ಬೆಂಗಳೂರು : ಇಂದು ಕೂಡ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿದ್ದು, ಹೊಸದಾಗಿ 10 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು 2773 ಜನರನ್ನು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 2725 ಕೋರೋನಾ ನೆಗೆಟಿವ್ ಆಗಿದೆ. ಇವರಲ್ಲಿ 10 ಜನರಿಗೆ ಕೊರೋನಾ ಸೋಂಕಿರುವುದಾಗಿ ತಿಳಿಸಿದರು.
ಇಂದು ಕಲಬುರಗಿ, ವಿಜಯಪುರದಲ್ಲಿ ಮೂವರಿಗೆ, ಮೈಸೂರಿನಲ್ಲಿ ಇಬ್ಬರಿಗೆ, ಬೆಳಗಾವಿ ಮತ್ತು ದಕ್ಷಿಣ ಕನ್ನಡ ಒಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಇಂದು ಕೊರೊನಾ ಸೋಂಕಿತರಾಗಿದ್ದಂತ 17 ಜನರು ಸಂಪೂರ್ಣವಾಗಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೇ ಇದುವರೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 17 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 129 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.








