ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ – ಕಂಪನಿ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಕಂಪೆನಿ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 5ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು. ಕಾಯ್ದಿರಿಸಿದ ವರ್ಗಕ್ಕೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕಚೇರಿಗೆ ಜುಲೈ 5, 2021 ರೊಳಗೆ ತಲುಪಿಸಬೇಕು.
ಕಚೇರಿ ವಿಳಾಸ:
ಜನರಲ್ ಮ್ಯಾನೇಜರ್,
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ,
ಕೆಆರ್ ಸರ್ಕಲ್ ಕಚೇರಿ,
ಬೆಂಗಳೂರು-560 001.
ನೇಮಕಾತಿ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಗಮನಿಸಿ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1406802102706397185?s=19
https://twitter.com/SaakshaTv/status/1407164561485185026?s=19
https://twitter.com/SaakshaTv/status/1406829577209581569?s=19
https://twitter.com/SaakshaTv/status/1407181615835586561?s=19
#Saakshatvjobs #Bescomrecruitment








