ವಿದ್ಯಾರ್ಥಿನಿಯ ಅಶ್ಲೀಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿ ಅರೆಸ್ಟ್
ಶಿವಮೊಗ್ಗ: ವಿದ್ಯಾರ್ಥಿಯೊಬ್ಬಳ ಅಶ್ಲೀಲ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಲ್ಲಿ ಕಿಡಿಗೇಡಿಯೊಬ್ಬನನ್ನ ಅರೆಸ್ಟ್ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ವಿದ್ಯಾರ್ಥಿನಿಯ ಅಶ್ಲೀಲ ಫೋಟೋ ಹರಿಬಿಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
10 ವರ್ಷ ಜೈಲು ಸೇರಿದ ಟಿಕ್ ಟಾಕ್ ಸ್ಟಾರ್ – ಕಾರಣ ಏನು..?
ಪ್ರದೀಪ್(25) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಈತ ಸಾಗರದಲ್ಲಿ ಪಾಲುದಾರಿಕೆಯೊಂದಿಗೆ ಬಟ್ಟೆಯಂಗಡಿ ನಡೆಸುತ್ತಿದ್ದು , ನಂದಪುರ ಹೋಬಳಿಯ ಚೆನ್ನಶೆಟ್ಟಿಕೊಪ್ಪದವನಾಗಿದ್ದಾನೆ.. ಹೆಗ್ಗೋಡು ಗ್ರಾಮದ ವಿದ್ಯಾರ್ಥಿನಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಈತ ಆಕೆಯ ಅಶ್ಲೀಲ ಫೋಟೋಗಳನ್ನು ತೆಗೆದುಕೊಂಡು ಆ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದ ಎನ್ನಲಾಗಿದೆ.. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ದೂರು ನೀಡಿದ್ದು, ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








