ಬಸವಸಾಗರ ಜಲಾಶಯದಿಂದ ನೀರು ಬಿಡುಗಡೆ : ಹೈ ಅಲರ್ಟ್ ಘೋಷಣೆ
ಯಾದಗಿರಿ : ಒಳ ಹರಿವು ಹೆಚ್ಚಳ ಹಿನ್ನಲೆಯಲ್ಲಿ ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದಾಗಿ ಕೃಷ್ಣಾ ನದಿ ತೀರದಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಜಲಾಶಯಕ್ಕೆ ಒಟ್ಟು 25 ಗೇಟ್ ಗಳಿದ್ದು, 8 ಗೇಟ್ ಓಪನ್ ಮಾಡಿ, ಕೃಷ್ಣಾ ನದಿಗೆ 45 ಸಾವಿರ ಕ್ಯೂಸೆಕ್ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ನದಿ ಪಾತ್ರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಬಸವಸಾಗರ ಜಲಾಶಯ 33.33 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯ ಹೊಂದಿದೆ. ಡ್ಯಾಂ ನಲ್ಲಿ ಸದ್ಯ 20.79 ಟಿಎಂಸಿ ನೀರು ಸಂಗ್ರಹವಾಗಿದ್ದು, 43 ಸಾವಿರ ಕ್ಯೂಸೆಕ್ ಒಳಹರಿವು ಇದ್ದ್ರೆ, 45 ಸಾವಿರ ಕ್ಯೂಸೆಕ್ ಹೊರಹರಿವಿದೆ.