ನನ್ನನ್ನು ಮುಂದಿನ ಸಿಎಂ ಎಂದು ಹೇಳಬೇಡಿ : ಜಿ.ಪರಮೇಶ್ವರ್
ತುಮಕೂರು : ನನ್ನನ್ನು ಮುಂದಿನ ಮುಖ್ಯಮಂತ್ರಿ ಎಂದು ಹೇಳಬೇಡಿ, ಆ ಪದವೇ ನನಗೆ ಡೇಂಜರ್ ಆಗುತ್ತದೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿದ್ದಾರೆ.
ಸದ್ಯ ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ಸಿಎಂ ರೇಸ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೆಸರು ಮೊದಲ ಸ್ಥಾನದಲ್ಲಿದ್ದರೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎರಡನೇ ಸ್ಥಾನದಲ್ಲಿದ್ದಾರೆ. ಇತ್ತ ಜಿ ಪರಮೇಶ್ವರ್ ಕೂಡ ಈ ರೇಸ್ ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಕಾಂಗ್ರೆಸ್ ಶಾಸಕರು ಹೆಚ್ಚಾಗಿ ಸಿದ್ದರಾಮಯ್ಯನವರ ಕಡೆ ಬ್ಯಾಟ್ ಬೀಸುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಈ ಮಧ್ಯೆ ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಗಂಕಾರನಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಮಾರಂಭದಲ್ಲಿ ನನ್ನನ್ನು ಮುಂದಿನ ಸಿಎಂ ಎಂದು ಹೇಳಬೇಡಿ, ಆ ಪದವೇ ನನಗೆ ಡೇಂಜರ್ ಆಗುತ್ತದೆ ಎಂದು ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಗಂಕಾರನಹಳ್ಳಿಗೆ ಪರಮೇಶ್ವರ್ ಆಗಮಿಸುತ್ತಿದ್ದಂತೆ ಅವರ ಅಭಿಮಾನಿಗಳು ಮುಂದಿನ ಸಿಎಂ ಎಂದು ಘೋಷಣೆ ಕೂಗಿದ್ರು. ಬಳಿಕ ಸಮಾರಂಭದಲ್ಲಿ ಅವರು ಭಾಷಣ ಮಾಡಲು ಮುಂದಾದಾಗ ಕೂಡ ಸಭಿಕರೊಬ್ಬರು ಮುಂದಿನ ಸಿಎಂ ಪರಮೇಶ್ವರ್ ಎಂದು ಘೋಷಣೆ ಕೂಗಿದ್ದಾರೆ. ಈ ಮಾತಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಸಿಎಂ ಪದ ಹೇಳಬೇಡಿ, ನನಗೆ ಡೇಂಜರ್ ಆಗುತ್ತದೆ ಎಂದಿದ್ದಾರೆ.
ಇದು ಸಾಮಾನ್ಯವಾಗಿಯೇ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಯಾಕೆಂದರೇ ಜಿ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಅವರೇ ಸಿಎಂ ಅಭ್ಯರ್ಥಿ ಎಂದು ಹೇಳಲಾಗಿತ್ತು. ಆಗ ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ್ ನಡುವೆ ಪೈಪೋಟಿ ಏರ್ಪಟ್ಟಿತ್ತು.









