ಮಾಸ್ಕ್ ವಿಚಾರಕ್ಕೆ ಗ್ರಾಹಕನ ಮೇಲೆ ಗುಂಡು ಹಾರಿಸಿದ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್..! – VIDEO VIRAL
ಉತ್ತರಪ್ರದೇಶ : ಉತ್ತರಪ್ರದೇಶದ ಬರೇಲಿಯಲ್ಲಿ ಆಘಾತಕಾರಿ ಘಟನೆಯೊಮದು ನಡೆದಿದೆ.. ಮಾಸ್ಕ್ ಹಾಕದ ಬಗ್ಗೆ ನಡೆದ ಚರ್ಚೆಯ ಹಿನ್ನೆಲೆಯಲ್ಲಿ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್, ಗ್ರಾಹಕನ ಮೇಲೆ ಗುಂಡು ಹಾರಿಸಿದ್ದು, ಈ ಸಂಬಂಧಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉತ್ತರಪ್ರದೇಶದ ಬರೇಲಿಯ ಬ್ಯಾಂಕ್ ಆಫ್ ಬರೋಡಾದ ಜಂಕ್ಷನ್ ರೋಡ್ ಶಾಖೆಯಲ್ಲಿ ಈ ಘಟನೆ ನಡೆದಿದೆ. ಬರೇಲಿಯ ಕೊತ್ವಾಲಿ ಠಾಣೆಯ ಪೊಲೀಸರು ಸೆಕ್ಯುರಿಟಿ ಗಾರ್ಡ್ ಕೇಶವ್ಕುಮಾರ್ನನ್ನು ಬಂಧಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ರೈಲ್ವೆ ನೌಕರ ರಾಜೇಶ್ ಕುಮಾರ್ ಎಂಬುವರರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಭದ್ರತಾ ಸಿಬ್ಬಂದಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಸ್ಕ್ ಧರಿಸದೆ ಬ್ಯಾಂಕಿನೊಳಗಡೆ ಬರುತ್ತಿದ್ದ ಗ್ರಾಹಕನನ್ನು ತಡೆದಾಗ ಇಬ್ಬರ ನಡುವೆ ಜಗಳ ನಡೆದು ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದಾಗಿ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ಭಾರತೀಯ ಮಹಿಳೆಗೆ ‘ಸ್ಟುಪಿಡ್ ಇಂಡಿಯನ್ಸ್ ’ ಎಂದು ನಿಂದಿಸಿ ಜೈಲು ಪಾಲಾದ ಸಿಂಗಪುರದ ಮಹಿಳೆ..!
In #Bareilly a railway employee was allegedly shot by bank guard at Junction road branch of Bank of Baroda. Reports claimed that victim was shot following an argument over not wearing mask. Victim taken to district hospital. pic.twitter.com/SzuHRpGZv5
— Arvind Chauhan (Silly Soul | मूर्ख आत्मा) (@Arv_Ind_Chauhan) June 25, 2021
‘ದೇಶದಲ್ಲಿ ಕೊರೋನಾ ಎರಡನೆಯ ಅಲೆ ಮುಗಿದಿಲ್ಲ’ – ‘ಡೆಲ್ಟಾ’ ಆತಂಕ
ಮಾಸ್ಕ್ ಧರಿಸದಿರುವುದಕ್ಕೆ ಜಗಳ ಆರಂಭವಾಯಿತು. ತದನಂತರ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿರುವುದಾಗಿ ಕುಮಾರ್ ಅವರ ಸಂಬಂಧಿಕರು ತಿಳಿಸಿದ್ದಾರೆ. ಈ ಸಂಬಂಧ ವಿಚಾರಣೆ ನಡೆಯುತ್ತಿರುವುದಾಗಿ ಬರೇಲಿ ಪೊಲೀಸ್ ಮುಖ್ಯಸ್ಥ ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.