ದೆಹಲಿ ಭೇಟಿ ಬಗ್ಗೆ ಸಿ.ಪಿ.ಯೋಗೇಶ್ವರ್ ಸ್ಪಷ್ಟನೆ CP Yogeshwar
ನವದೆಹಲಿ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿ ಭೇಟಿ ಬೆನ್ನಲ್ಲೆ ಸಚಿವ ಸಿ.ಪಿ.ಯೋಗೇಶ್ವರ್ ದೆಹಲಿಗೆ ಭೇಟಿ ನೀಡಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿತ್ತು.
ಇದೀಗ ಈ ಬಗ್ಗೆ ಸಚಿವ ಸಿ.ಪಿ.ಯೋಗೇಶ್ವರ್ ಸ್ಪಷ್ಟನೆ ನೀಡಿದ್ದು, ನಾನು ವೈಯಕ್ತಿಕ ಕೆಲಸಗಳ ಹಿನ್ನೆಲೆಯಲ್ಲಿ ದೆಹಲಿಗೆ ಬಂದಿದ್ದು, ಈ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದಿದ್ದಾರೆ.
ಶುಕ್ರವಾರ ರಾತ್ರಿ ದೆಹಲಿಗೆ ಭೇಟಿ ನೀಡಿದ್ದ ಸಿ.ಪಿ.ಯೋಗೇಶ್ವರ್, ಇಂದು ಮಧ್ಯಾಹ್ನ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕೆ ಕಾಯುತ್ತಿರುವೆ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಫಲಿತಾಂಶ ಬರಲಿ ಈ ಬಗ್ಗೆ ಚರ್ಚೆ ಬೇಡ.
ಪ್ರತಿ ಬಾರಿ ನಾನು ದೆಹಲಿಗೆ ಬಂದಾಗ ರಾಜಕೀಯ ಸ್ಪರ್ಶ ನೀಡಲಾಗುತ್ತದೆ. ಆದರೆ, ಈಗ ವೈಯಕ್ತಿಕ ಕೆಲಸಕ್ಕೆ ಬಂದಿದ್ದು, ರಾಜಕೀಯ ಉದ್ದೇಶ ಇಲ್ಲ’ ಎಂದು ಸ್ಪಷ್ಟಪಡಿಸಿದರು.









