ಕೊಂಕಣ ರೈಲ್ವೆ ವಿಭಾಗದಲ್ಲಿ ಅಕೌಂಟೆಂಟ್, ಡಿಜಿಎಂ, ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ರೈಲ್ವೆ ಕೊಂಕಣ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಅಕೌಂಟೆಂಟ್, ಡಿಜಿಎಂ, ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊಂಕಣ ರೈಲ್ವೆ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ 01 ಜುಲೈ, 2021 ಆಗಿದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜೂನ್ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಕಾಯ್ದಿರಿಸಿದ ವರ್ಗಕ್ಕೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇದೆ. (ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ)
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಎಸ್‌ಎಸ್‌ಎಲ್‌ಸಿ/ ಪಿಯುಸಿ ಹಾಗೂ ಪದವಿ/ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು. ಅಭ್ಯರ್ಥಿಗಳು ಕೊಂಕಣ ರೈಲ್ವೆಯ ಅಧಿಕೃತ ವೆಬ್‌ಸೈಟ್ https://konkanrailway.com/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನ: 01 ಜುಲೈ, 2021
ವೆಬ್‌ಸೈಟ್: https://konkanrailway.com
ಹೆಚ್ಚಿನ ವಿವರಗಳಿಗೆ ಕೊಂಕಣ ರೈಲ್ವೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಗಮನಿಸಿ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ಖಾಲಿ ಹೊಟ್ಟೆಯಲ್ಲಿ ಮೆಂತ್ಯ ನೀರು ಕುಡಿಯುವುದರ ಆರೋಗ್ಯ ಪ್ರಯೋಜನಗಳು#Saakshatv #healthtips #fenugreek https://t.co/43x8RyFjFo
— Saaksha TV (@SaakshaTv) June 24, 2021
https://twitter.com/SaakshaTv/status/1407496865655017475?s=19
ಮಾವಿನ ಹಣ್ಣಿನ ಸಿಪ್ಪೆಯ ಆರೋಗ್ಯ ಪ್ರಯೋಜನಗಳು#mangopeel #healthbenefits https://t.co/6Gee3KyOpO
— Saaksha TV (@SaakshaTv) June 26, 2021
https://twitter.com/SaakshaTv/status/1407916513064062979?s=19
https://twitter.com/SaakshaTv/status/1407554549435580422?s=19
#Saakshatvjobs #konkanrailwayjobs








