“ಮೊದಲು ಲಸಿಕೆ, ಆಮೇಲೆ ‘ಮನ್ ಕೀ ಬಾತ್” – ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿ
ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಶುರುವಾದಾಗಿನಿಂದಲೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು , ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸತತವಾಗಿ ವಾಗ್ದಾಳಿ ನಡೆಸುತ್ತಲೇ ಬಂದಿದ್ದಾರೆ..
ಅದ್ರಲ್ಲೂ ಸಾಮಾಜಿಕ ಜಾಲತಾಣದಲಲ್ಲಿ ನಿರಂತರವಾಗಿ ಸರಣಿ ಪೋಸ್ಟ್ ಗಳ ಮೂಲಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಲೇ ಬಂದಿದ್ದಾರೆ.. ಅದ್ರಲ್ಲೂ ಕೊರೊನಾ ನಿಯಂತ್ರಣದಲ್ಲಿ ಸಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಲಸಿಕೆ ವಿಚಾರವಾದಲ್ಲೂ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನ ಕೇಳುತ್ತಾ ಆಕ್ರೋಶ ಹೊರಹಾಕುತ್ತಲೇ ಇರುತ್ತಾರೆ.. ಇದೀಗ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮದದ ವಿರುದ್ಧ ಕಿಡಿಕಾರಿರುವ ರಾಹುಲ್ ಗಾಂಧಿ ‘ಮೊದಲು ಲಸಿಕೆ ನೀಡಿ, ನಂತರ ಮನ್ ಕೀ ಬಾತ್ ನಲ್ಲಿ ಮಾತಾಡಿ ಎಂದು ವ್ಯಂಗ್ಯವಾಡಿದ್ದಾರೆ.
ಮೊದಲು ಈ ದೇಶದ ಪ್ರತಿಯೊಬ್ಬರಿಗೂ ಕೊರೊನಾ 19 ಲಸಿಕೆ ತಲುಪುವಂತೆ ಮಾಡಿ. ಬಳಿಕ ನಿಮ್ಮ ಮನ್ ಕೀ ಬಾತ್ ನಡೆಸಿ ಎಂದು ಹೇಳಿದ್ದಾರೆ. ಹಾಗೇ ಕೊರೊನಾ ಲಸಿಕೆ ಬಗೆಗಿನ ಸತ್ಯಗಳು ಎಂಬ, ಗ್ರಾಫ್ ಚಾರ್ಟ್‍ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲಿ ಕೊರೊನಾ ಲಸಿಕೆ ನೀಡಿದ ಡಾಟಾ ಉಲ್ಲೇಖವಾಗಿರುವುದನ್ನು ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮನ್ ಕೀ ಬಾತ್ ಪ್ರಧಾನಿ ಮೋದಿಯವರ ತಿಂಗಳ ರೇಡಿಯೋ ಕಾರ್ಯಕ್ರಮವಾಗಿದೆ. ಪ್ರತಿ ತಿಂಗಳ ಕೊನೇ ಭಾನುವಾರದಂದು ಈ ಕಾರ್ಯಕ್ರಮದ ಮೂಲಕ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದೇ ಮೊದಲಿನಿಂದಲೂ ರಾಹುಲ್ ಗಾಂಧಿ ಹೇಳುತ್ತಾ ಬಂದಿದ್ದಾರೆ. ಎರಡನೇ ಅಲೆಯಲ್ಲಿ ಸೋಂಕು ನಿಯಂತ್ರಣದ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳದೆ ಇದ್ದರೆ, ಮೂರನೇ ಅಲೆ ಇನ್ನಷ್ಟು ಭೀಕರವಾಗಿರಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.