Corona Report ; ಕಳೆದ 24 ಗಂಟೆಗಳಲ್ಲಿ 45,951 ಕೇಸ್ ಪತ್ತೆ
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 45,951 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. 817 ಮಂದಿ ಸೋಂಕಿತರು ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 45,951 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 817 ಮಂದಿ ಸೋಂಕಿತರ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಾದ್ಯಂತ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,03,62,848ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 3,98,454ಕ್ಕೆ ಬಂದು ತಲುಪಿದೆ.
ಇನ್ನು ನಿನ್ನೆ 60,729 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಈವರೆಗೂ ದೇಶದಲ್ಲಿ 2,94,27,330 ಮಂದಿ ಸೋಂಕಿನಿಂದ ಚೇತರಿಸಿಕೊಂಡಂತಾಗಿದೆ. ದೇಶದಲ್ಲಿನ್ನೂ 5,37,064 ಸಕ್ರಿಯ ಪ್ರಕರಣಗಳಿವೆ.
ಈವರೆಗೂ 33,28,54,527 ಮಂದಿಗೆ ಲಸಿಕೆ ಹಾಕಲಾಗಿದೆ.