ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಿ : ಸುಪ್ರೀಂ Supreme COURT
ನವದೆಹಲಿ : ಕೊರೊನಾ ಎರಡನೇ ಅಲೆಯಲ್ಲಿ ದೇಶದಾದ್ಯಂತ ಸಾಕಷ್ಟು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಹೀಗೆ ಹೆಮ್ಮಾರಿ ಸೋಂಕಿಗೆ ಜೀವಬಿಟ್ಟವರ ಕುಟುಂಬಸ್ಥರಿಗೆ ಹರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಈ ಸಂಬಂಧ ನ್ಯಾಯಮೂರ್ತಿ ಅಶೋಕ್ ಭೂಷಣ್ ಪೀಠ ಮಹತ್ವದ ಆದೇಶ ನೀಡಿದೆ.
ಮುಂದಿನ ಆರು ತಿಂಗಳಿನಲ್ಲಿ ಕೊರೊನಾದಿಂದ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರ ನೀಡಿ ಎಂದು ಆದೇಶಿಸಿದೆ.
ಪರಿಹಾರದ ಮೊತ್ತ ಕೇಂದ್ರ ಸರ್ಕಾರ ಹಾಗೂ ಎನ್ ಡಿಎಂಎ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದೆ.
ಇನ್ನು ದೇಶದಲ್ಲಿ ಕಳೆದ 24 ಗಂಟೆಯಲ್ಲಿ 45,951 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 817 ಸಾವುಗಳು ಸಂಭವಿಸಿವೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,03,62,848 ಕ್ಕೆ ಸಾವನ್ನಪ್ಪಿದವರ ಸಂಖ್ಯೆ 3,98,454 ಕ್ಕೆ ಏರಿಕೆಯಾಗಿದೆ.









