ಶೀಘ್ರದಲ್ಲೇ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ : ನಾರಾಯಣಗೌಡ
ಮಡಿಕೇರಿ : ಕೆಳ ದಿನಗಳಲ್ಲಿ ಮತ್ತೆ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಸಿಗಲಿದೆ. ಅವರೊಂದಿಗೆ ಶಾಸಕ ಮುನಿರತ್ನ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಹೇಳಿದ್ದಾರೆ.
ಮಡಿಕೇರಿಯಲ್ಲಿ ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದ ಸಂದರ್ಭ ಮಧ್ಯಮಗಳೊಂದಿಗೆ ಮಾತನಾಡಿದ ನಾರಾಯಣಗೌಡ, ಶಾಸಕ ರಮೇಶ್ ಜಾರಕಿಹೊಳಿ ಅವರ ಮೇಲಿರುವ ಆರೋಪಗಳೆಲ್ಲಾ ಆದಷ್ಟು ಬೇಗ ಮುಕ್ತವಾಗಿ ಅವರು ಸದ್ಯದಲ್ಲೇ ಸಚಿವರಾಗುತ್ತಾರೆ. ಅವರೊಂದಿಗೆ ಶಾಸಕ ಮುನಿರತ್ನ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಭರವಸೆ ನೀಡಿದರು.
ಇನ್ನು ಯಡಿಯೂರಪ್ಪ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಬ್ರಹಾಂ ಆರೋಪದ ಬಗ್ಗೆ ಮಾತನಾಡಿ, ಯಡಿಯೂರಪ್ಪನವರು ಈಗಲ್ಲ, ಹಿಂದಿನಿಂದಲೂ ನನಗೆ ಚೆನ್ನಾಗಿ ಗೊತ್ತು. ಅವರು ನಾವು ಒಂದೇ ಊರಿನವರು. ಅವರು ಅಂತಹ ಕೆಲಸ ಮಾಡಿರುವುದಿಲ್ಲ, ಮಾಡುವುದೂ ಇಲ್ಲ. ಕೋರ್ಟ್‍ಗೆ ಹೋದವರಿಗೆ ಅದು ಗೊತ್ತಾಗುತ್ತದೆ ಎಂದರು.









