ಆಪ್ತನ ಬಂಧನಕ್ಕೆ ರಾಮುಲು ಗರಂ : ವಿಜಯೇಂದ್ರ ಫಸ್ಟ್ ರಿಯಾಕ್ಷನ್
ಬೆಂಗಳೂರು : ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದು ರಾಮುಲು ಆಪ್ತ ಬಂಧನ ವಿಚಾರವಾಗಿ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಆಪ್ತನ ಬಂಧನದಿಂದಾಗಿ ಸಚಿವ ಶ್ರೀ ರಾಮುಲು ಗರಂ ಆಗಿದ್ದು, ತಮ್ಮ ಆಪ್ತರ ಬಳಿ ಬಿ.ವೈ ವಿಜಯೆಂದ್ರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದುಬಂದಿದೆ. ನನ್ನ ಆಪ್ತ ತಪ್ಪು ಮಾಡಿದ್ದೇ ನನಗೆ ತಿಳಿಸಬೇಕಾಗಿತ್ತು. ಅದು ಬಿಟ್ಟು ಏಕಾಏಕಿ ಪೊಲೀಸರಿಗೆ ದೂರು ಕೊಟ್ಟಿದ್ದೇಕೆ..? ಇದು ನನ್ನ ವರ್ಚಸ್ಸು ಕುಗ್ಗಿಸುವ ಪ್ರಯತ್ನ ಎಂದು ರಾಮುಲು ಬೇಸರ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಇದೇ ವಿಚಾರವಾಗಿ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ.
ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.
ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ ಎಂದು ಟ್ವೀಟ್ ಮಾಡಿದ್ದಾರೆ.