ಉತ್ತರಾಖಂಡ್ ಸಿಎಂ ತಿರಥ್ ಸಿಂಗ್ ರಾವತ್ ರಾಜೀನಾಮೆ
ನವದೆಹಲಿ : ಕ್ಷಿಪ್ರ ರಾಜಕೀಯ ಬೆಳವಣಿಗೆಗಳಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಸ್ಥಾನಕ್ಕೆ ತಿರಥ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ.
ಅವರು ಕಳೆದ ನಾಲ್ಕು ತಿಂಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದರು.
ಇದೀಗ ಅವರ ರಾಜೀನಾಮೆಯೊಂದಿಗೆ ಒಂದೇ ವರ್ಷದಲ್ಲಿ ಉತ್ತರಾಖಂಡ ಮೂವರ ಮುಖ್ಯಮಂತ್ರಿಗಳು ಬದಲಾದಂತಾಗಿದೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ತಿರಥ್ ಸಿಂಗ್ ರಾವತ್, ಹೈಕಮಾಂಡ್ ನೀಡಿದ್ದ ಜವಾಬ್ದಾರಿಗೆ ಧನ್ಯವಾದ ಅರ್ಪಿಸಿದರು.
ಇಂದು ಮಧ್ನಾಹ್ನ 3 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಈ ವೇಳೆ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇತ್ತ ಪಕ್ಷದ ಹೈಕಮಾಂಡ್ ಶಾಸಕರಾದ ಸತ್ಪಾಲ್ ಮಹಾರಾಜ್ ಮತ್ತು ಧನ್ ಸಿಂಗ್ ರಾವತ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಈ ಹಿಂದೆ ಬಿಜೆಪಿ ಹೈಕಮಾಂಡ್ ತ್ರಿವೇಂದ್ರ ಸಿಂಗ್ ರಾವತ್ ರನ್ನು ಅಧಿಕಾರದಿಂದ ಕೆಳಗಿಳಿಸಿತ್ತು.