Corona Report : ಕಳೆದ 24 ಗಂಟೇಲಿ 43,071 ಮಂದಿಗೆ ಸೋಂಕು
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 43,071 ಜನರಲ್ಲಿ ಸೋಂಕು ಪತ್ತೆಯಾಗಿದೆ. 52,299 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 43,071 ಜನರಲ್ಲಿ ಸೋಂಕು ಪತ್ತೆಯಾಗಿದೆ.
955 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 3,05,45,433ಕ್ಕೆ ಏರಿಕೆಯಾಗಿದೆ.
ಜೊತೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 4,02,005ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 52,299 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
2,96,58,078 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 4,85,350 ಕೋವಿಡ್ ಸಕ್ರಿಯ ಪ್ರಕರಣಗಳಿವೆ.