ಕೋರ್ಟ್ ಅಂಗಳಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ವಿಚಾರ SSLC
ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ್ದಂತೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ವಕೀಲ ಎಸ್.ವಿ.ಸಿಂಗ್ರೇಗೌಡ ಎಂಬುವವರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ರಾಜ್ಯ ಸರ್ಕಾರ ಮಕ್ಕಳ ವಿಚಾರದಲ್ಲಿ ತಾರತಮ್ಯ ಮಾಡ್ತಿದೆ ಎಂದು ದೂರಿದ್ದಾರೆ.
ಸಂವಿಧಾನದ ಪರಿಚ್ಛೇದ 14ರ ಅಡಿಯಲ್ಲಿ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗಿದೆ.
ಅಂದಾಜು 9 ಲಕ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಯಾವುದೇ ಅನಾಹುತ ಆದ್ರೆ ಸರ್ಕಾರವೇ ಹೊಣೆ.
8,9ನೇ ತರಗತಿ ಪರೀಕ್ಷಾ ಅಂಕಗಳನ್ನ ಪರಿಗಣಿಸಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪಾಸ್ ಮಾಡಿ.
ಕೊರೊನಾ ನಡುವೆ ಮಕ್ಕಳಿಗೆ ಪರೀಕ್ಷೆ ಬರೆಸುವುದು ಒಳ್ಳೆಯದಲ್ಲ ಎಂದು ಹೈ ಕೋರ್ಟ್ ಗೆ ಸಾರ್ಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ವಕೀಲರು ಹೇಳಿದ್ದಾರೆ.









