ಸುಮಲತಾ-ಹೆಚ್ಡಿಕೆ ಕಾಳಗಕ್ಕೆ ಪ್ರತಾಪ್ ಸಿಂಹ ಎಂಟ್ರಿ : ಕುಮಾರಸ್ವಾಮಿ ಪರ ಬ್ಯಾಟ್
ಮಂಡ್ಯ : ಸಂಸದೆ ಸುಮಲತಾ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಗಿಲು ಮುಟ್ಟಿದೆ.
ಇದೀಗ ಈ ಇಬ್ಬರ ಕಾಳಗಕ್ಕೆ ಸಂಸದ ಪ್ರತಾಪ್ ಸಿಂಹ ಎಂಟ್ರಿ ಕೊಟ್ಟಿದ್ದು, ಹೆಚ್ ಡಿ ಕುಮಾರಸ್ವಾಮಿ ಅವರ ಪರ ಬ್ಯಾಟ್ ಬೀಸಿದ್ದಾರೆ.
ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂಬ ವಿಚಾರವಾಗಿ ಸುದ್ದಿಗಾರರ ಪ್ರಶ್ನಗೆ ಉತ್ತರಿಸಿದ ಪ್ರತಾಪ್ ಸಿಂಹ, ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ ಎಂದು ಅಧಿಕಾರಿಗಳೇ ತಿಳಿಸಿದ್ದಾರೆ.
ಅಂಥಹದರಲ್ಲಿ ಡ್ಯಾಂ ಬಿರುಕು ಬಿಟ್ಟಿದೆ ಅನ್ನೋದು ಸರಿಯಲ್ಲ ಎಂದು ಪರೋಕ್ಷವಾಗಿ ಸಂಸದೆ ಸುಮಲತಾಗೆ ಟಾಂಗ್ ಕೊಟ್ಟಿದ್ದಾರೆ.
ಅಕ್ರಮ ಗಣಿಗಾರಿಕೆ ಸ್ಥಳಗಳಲ್ಲಿ ಸುಮಲತಾಗೆ ಅಡ್ಡಿ ವಿಚಾರವಾಗಿ ಮಾತನಾಡಿದ ಸಿಂಹ,ಸುಮಲತಾ ಅವರ ಹೇಳಿಕೆಯನ್ನೇ ಮಾಧ್ಯಮದವರು ಸತ್ಯ ಎಂದು ಭಾವಿಸಬೇಡಿ.
ಸತ್ಯದ ಆಳಕ್ಕೆ ಹೋಗಿ ತಿಳಿದುಕೊಳ್ಳುವ ಮನಸ್ಥಿತಿ ಮಾಧ್ಯಮದವರಿಗೆ ಇರಬೇಕಾಗುತ್ತದೆ.
ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ಕೊಡಬಹುದು. ಯಾರೊಬ್ಬರೂ ಎಲ್ಲಿಯೂ ಅಡ್ಡಿ ಪಡಿಸಿಲ್ಲ. ಇದೊಂದು ರಾಜಕೀಯ ಅಷ್ಟೇ ಎಂದು ಲೇವಡಿ ಮಾಡಿದರು.









