ಹೌದು ನಾನು ಭ್ರಷ್ಟಾಚಾರದಲ್ಲಿ ಅಂಬಾಸಿಡರ್ : ಹೆಚ್.ಡಿ.ಕುಮಾರಸ್ವಾಮಿ
ರಾಮನಗರ : ಹೌದು ನಾನು ಭ್ರಷ್ಟಾಚಾರದಲ್ಲಿ ಅಂಬಾಸಿಡರ್. ಅನೇಕ ವರ್ಷಗಳಿಂದ ನಾನು ನಮ್ಮ ಕುಟುಂಬ ಭ್ರಷ್ಟಾಚಾರದ ವಿಷಯದಲ್ಲಿ ಹೋರಾಟ ಮಾಡ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಭ್ರಷ್ಟಾಚಾರದ ವಿಷಯದಲ್ಲಿ ಕುಮಾರಸ್ವಾಮಿ ಅಂಬಾಸಿಡರ್ ಎಂಬ ಹೇಳಿಕೆ ವಿಚಾರಕ್ಕೆ ಬಿಡದಿಯಲ್ಲಿ ಮಾತನಾಡಿದ ಹೆಚ್ ಡಿಕೆ, ಹೌದು ನಾನು ಭ್ರಷ್ಟಾಚಾರದಲ್ಲಿ ಅಂಬಾಸಿಡರ್.
ಅನೇಕ ವರ್ಷಗಳಿಂದ ನಾನು ನಮ್ಮ ಕುಟುಂಬ ಭ್ರಷ್ಟಾಚಾರದ ವಿಷಯದಲ್ಲಿ ಹೋರಾಟ ಮಾಡ್ತಿದ್ದೇವೆ.
ಭ್ರಷ್ಟ ಅಧಿಕಾರಿಗಳು, ಭ್ರಷ್ಟಾಚಾರದ ವಿರುದ್ಧ ದಾಖಲೆ ಸಮೇತ ಹೋರಾಟ ಮಾಡಿದ್ದೇವೆ ಎಂದು ತಿರುಗೇಟು ನೀಡಿದರು.
ಇದೇ ವೇಳೆ ಫೋಟೋ ವೈರಲ್ ಬಗ್ಗೆ ಮಾತನಾಡಿ, ನಾನು ಸಾರ್ವಜನಿಕರ ಮುಂದೆ ಕೂಡ ಕೈಕಟ್ಟಿ ನಿಲ್ಲುತ್ತೇನೆ.
ಅಂಬರೀಶ್ ಮುಂದೆ ಕೈ ಕಟ್ಟಿ ನಿಂತ್ರೆ ಅವರಿಗೆ ನಾನೇನು ಗುಲಾಮನಾಗಿದ್ನ ಎಂದು ಪ್ರಶ್ನಿಸಿದರು.
ಈ ವಿಷಯಕ್ಕೆ ಮಾಧ್ಯಮದವರು ಹೆಚ್ಚಿನ ಮನ್ನಣೆ ಕೊಡುವ ಅವಶ್ಯಕತೆ ಇಲ್ಲ.
ನಾನು ಕಳೆದ ಎರಡು ದಿನದ ಹಿಂದೆ ಹೇಳಿದ್ದ ಹೇಳಿಕೆಗೆ ಸ್ಕೋಪ್ ಕೊಡುವ ಅವಶ್ಯಕತೆ ಇಲ್ಲ.
ದೇಶದಲ್ಲಿ ಹಾಗೂ ರಾಜ್ಯದಲ್ಲಿ ಅನೇಕ ಸಮಸ್ಯೆಗಳಿಗೆ ಅದರ ಬಗ್ಗೆ ಮಾಧ್ಯಮದವರು ಗಮನಹರಿಸಬೇಕು ಎಂದರು.








