ಸಿ.ಪಿ.ಯೋಗೇಶ್ವರ್ ಒಬ್ಬ 420 ವ್ಯಕ್ತಿ : ಡಿ.ಕೆ.ಸುರೇಶ್
ಬಿಡದಿ : ಸಚಿವ ಸಿ.ಪಿ.ಯೋಗೇಶ್ವರ್ ಅವರು ಒಬ್ಬ 420 ವ್ಯಕ್ತಿಯಾಗಿದ್ದಾರೆ. ಅವರನ್ನು ಜನರೇ 420 ಅಂತ ಕರೆಯುತ್ತಾರೆ. ಆ 420 ಮಾತಿಗೆ ನಾನೇನು ಹೇಳಲಿ ಎಂದು ಸಂಸದ ಡಿ.ಕೆ. ಸುರೇಶ್ ಟೀಕಿಸಿದ್ದಾರೆ.
ಬಿಡದಿಯಲ್ಲಿ ಶನಿವಾರ ಮೀನು ಕೃಷಿ ದಿನಾಚರಣೆಯಲ್ಲಿ ಭಾಗಿಯಾಗಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ ವಿರುದ್ಧ ಕಿಡಿಕಾರಿದರು.
ಬಿಜೆಪಿಗೆ ಜೈಲಿಗೆ ಹೋಗಿ ಬಂದವರನ್ನು ಸೇರಿಸಿಕೊಳ್ಳುವುದಿಲ್ಲ ಎಂಬ ಯೋಗೇಶ್ವರ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಸಚಿವ ಸಿ.ಪಿ.ಯೋಗೇಶ್ವರ್ ಅವರು ಒಬ್ಬ 420 ವ್ಯಕ್ತಿಯಾಗಿದ್ದಾರೆ. ಅವರನ್ನು ಜನರೇ 420 ಅಂತ ಕರೆಯುತ್ತಾರೆ. ಆ 420 ಮಾತಿಗೆ ನಾನೇನು ಹೇಳಲಿ. ಅಂತಹವರ ಹೇಳಿಕೆಗೆ ಪ್ರತಿಕ್ರಿಯೆ ನೀಡಬೇಕಾಗಿಲ್ಲ’ ಎಂದರು.
ಇನ್ನು ಅಭಿಮಾನಿಗೆ ಡಿಕೆಶಿ ಹೊಡೆದ ವಿಚಾರವಾಗಿ ಮಾತನಾಡಿ, ಬಿಜೆಪಿಯವರಿಗೆ ಮಾಡಲು ಬೇರೆ ಏನೂ ಕೆಲಸ ಇಲ್ಲ. ಇದನ್ನೇ ದೊಡ್ಡದಾಗಿ ಬಿಂಬಿಸಲು ಹೊರಟಿದ್ದಾರೆ. ಬೇರೆಯವರ ಹೆಗಲ ಮೇಲೆ ಕೈಹಾಕಿದರೆ ಸಂಬಂಧ ಇದೆ ಎನ್ನುತ್ತಾರೆ. ಯಾರೊಬ್ಬರೂ ಬಂದು ಹೆಗಲ ಮೇಲೆ ಕೈ ಹಾಕುವಾಗ ಏನು ಮಾಡಬೇಕೆಂದು ನೀವೇ ಹೇಳಬೇಕು. ಸಾರ್ವಜನಿಕ ಜೀವನದಲ್ಲಿ ಕೆಲವೊಂದು ಘಟನೆಗಳು ಘಟಿಸುತ್ತವೆ. ಅದಕ್ಕೆ ಹೆಚ್ಚಿನ ಮಹತ್ವ ನೀಡುವ ಅವಶ್ಯಕತೆ ಇಲ್ಲ ಎಂದು ಹಾರಿಕೆ ಹೇಳಿಕೆ ಕೊಟ್ಟರು.