ಸೆಪ್ಟೆಂಬರ್ 12 ರಂದು ನೀಟ್ ಪರೀಕ್ಷೆ – ಧರ್ಮೇಂದ್ರ ಪ್ರಧಾನ್ ಪ್ರಕಟ
ನವದೆಹಲಿ : 2021 ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ – ನೀಟ್ ಸೆಪ್ಟೆಂಬರ್ 12 ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಪ್ರಕಟಿಸಿದ್ದಾರೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ನಾಳೆ ಸಂಜೆ 5 ಗಂಟೆಯಿಂದ ಪ್ರಾರಂಭವಾಗಲಿದೆ. ಪರೀಕ್ಷೆ ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದೆ ಎಂದು ಧರ್ಮೇಂದ್ರ ಪ್ರದಾನ್ ಅವರು ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಕೊರೋನಾ ಹಿನ್ನಲೆಯಲ್ಲಿ ಪರೀಕ್ಷೆಯನ್ನು ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದೆ. 2020 ರಲ್ಲಿ ಬಳಸಿದ 3862 ಕೇಂದ್ರಗಳಿಂದ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಸಹ ಹೆಚ್ಚಿಸಲಾಗುವುದು. ಕೊರೋನಾ ಮಾರ್ಗಸೂಚಿ ಪಾಲಿಸಲು ಕೇಂದ್ರದಲ್ಲಿರುವ ಎಲ್ಲ ಅಭ್ಯರ್ಥಿಗಳಿಗೆ ಫೇಸ್ ಮಾಸ್ಕ್ ನೀಡಲಾಗುವುದು. ಇದರೊಂದಿಗೆ ಎಲ್ಲ ನಿಯಮ ಪಾಲಿಸಲಾಗುವುದು ಎಂದು ಹೇಳಿದ್ದಾರೆ.