“ಜುಲೈ 4 ರಿಂದಲೇ ದೇಶದಲ್ಲಿ ಕೊರೊನಾ 3ನೇ ಅಲೆ ಆರಂಭ”
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿಣಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಈ ನಡುವೆ ಜುಲೈ 4 ರಿಂದಲೇ ಕೊರೊನಾ ಮೂರನೇ ಅಲೆ ದೇಶದಲ್ಲಿ ಆರಂಭವಾಗಿದೆ ಎಂದು ಹೈದರಾಬಾದ್ ಮೂಲದ ತಜ್ಞ ಡಾ. ವಿಪಿನ್ ಶ್ರೀವಾತ್ಸವ್, ಹೇಳಿದ್ದಾರೆ. ಜುಲೈ 4ರಿಂದ ಈವರೆಗೆ ಕಂಡುಬಂದಿರುವ ಸೋಂಕಿತರ ಪ್ರಮಾಣ ಹಾಗೂ ಸಾವಿನ ಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಅವರು, 2021ರ ಫೆಬ್ರವರಿ ಮೊದಲ ವಾರದ ಆರಂಭದಲ್ಲಿ ಎರಡನೇ ಅಲೆ ಕಾಣಿಸಿಕೊಂಡ ರೀತಿಯಲ್ಲಿಯೇ ಮೂರನೇ ಅಲೆ ಆರಂಭವಾದಂತೆ ಕಾಣುತ್ತಿದೆ ಎಂದು ತಿಳಿಸಿದ್ದಾರೆ.
15 ತಿಂಗಳ ಅವಧಿಯಲ್ಲಿನ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣವನ್ನು ಆಧರಿಸಿ ಡಾ. ವಿಪಿನ್ ಶ್ರೀವಾತ್ಸವ ಈ ಒಂದು ವರದಿಯನ್ನು ತಯಾರಿಸಿದ್ದು, ಆದರೆ ಪ್ರಸ್ತುತ ಲಸಿಕೆ ನೀಡುತ್ತಿರುವುದರಿಂದ ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಮೂರನೇ ಅಲೆಯ ಅಬ್ಬರವನ್ನು ತಗ್ಗಿಸಬಹುದಾಗಿದೆ ಎಂದು ಹೇಳಿದ್ದಾರೆ.
ಒಟ್ಟಾರೆ ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..