ಜನ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿರುವುದು ಆತಂಕಕ್ಕೆ ಕಾರಣ – ಮೋದಿ
ನವದೆಹಲಿ: ದೇಶಾದ್ಯಂತ ಕೋವಿಡ್ 2ನೇ ಅಲೆ ಇನ್ನೇನು ಕಡಿಮೆಯಾಗ್ತಿದೆ ಎನ್ನುವ ಹೊತ್ತಿನಲ್ಲಿ ಡೆಲ್ಟಾ ಆತಂಕ ಸೃಷ್ಟಿಸಿದೆ.. ಕರ್ನಾಟಕವೂ ಸೇರಿ ಬಹುತೇಕ ರಾಜ್ಯಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ.. ಈ ನಡುವೆ ಮತ್ತೆ ಜನ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದೆ.. ಈ ಬಗ್ಗೆ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಪಾಡಿಕೊಳ್ಳದೆ ಜನ ಸಂದಣಿಯಲ್ಲಿ ಭಾಗಿಯಾಗುತ್ತಿರುವ ಬೆಳವಣಿಗೆ ಆತಂಕಕ್ಕೆ ಕಾರಣವಾಗಿದ್ದು, ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವ ಮೂಲಕ ನಾವೆಲ್ಲರು ಒಟ್ಟಾಗಿ ಮೂರನೇ ಅಲೆ ಬಾರದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಮೋದಿ ಹೇಳಿದ್ದಾರೆ.
ಈಶಾನ್ಯ ರಾಜ್ಯಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ 8 ರಾಜ್ಯಗಳ ಸಿಎಂಗಳ ಜೊತೆಗೆ ಮಹತ್ವದ ಸಭೆ ನಡೆಸಿದರು. ಅರುಣಾಚಲ ಪ್ರದೇಶ, ತ್ರಿಪುರ, ಅಸ್ಸಾಂ, ಮಣಿಪುರ, ಮೇಘಾಲಯ, ನಾಗಲ್ಯಾಂಡ್, ಮಿಜೋರಾಂ, ಸಿಕ್ಕಿಂ ಸಿಎಂಗಳ ಜೊತೆಗೆ ಚರ್ಚೆ ನಡೆಸಿದ ಮೋದಿ, ವೇಗವಾಗಿ ಕೊರೊನಾ ನಿಯಂತ್ರಣ ಮಾಡುವಂತೆ ಸೂಚಿಸಿದ್ದಾರೆ.
ದೇಶದ 58 ಜಿಲ್ಲೆಗಳಲ್ಲಿ ಶೇ.10 ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಪೈಕಿ 37 ಜಿಲ್ಲೆಗಳು ಈಶಾನ್ಯ ರಾಜ್ಯಗಳಿಗೆ ಸೇರಿದ್ದು, ಈಶಾನ್ಯ ರಾಜ್ಯದ ಕೆಲವು ಜಿಲ್ಲೆಗಳಲ್ಲಿನ ಸದ್ಯದ ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದು ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.
ವೈರಸ್ ಹರಡುವ ವಿಚಾರದಲ್ಲಿ ಜಾಗರೂಕರಾಗಿರಬೇಕು, ವೇಗವಾಗಿ ಕಾರ್ಯ ನಿರ್ವಹಿಸಿ ನಿಯಂತ್ರಣಕ್ಕೆ ಮಾಡಬೇಕಿದೆ. ಸೋಂಕು ಹೆಚ್ಚು ಹರಡುತ್ತಿರುವ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್ ಹೆಚ್ಚು ಮಾಡಬೇಕಿದ್ದು, ಮೈಕ್ರೊ ಲೆವಲ್ ಕಂಟೈನ್ಮೆಂಟ್ ಝೋನ್ ಗಳ ಮೂಲಕ ಸೋಂಕು ನಿಯಂತ್ರಣಕ್ಕೆ ಕ್ರಮವಹಿಸಬೇಕು. ಮೂರನೇ ಅಲೆ ತಡೆಯಲು ವ್ಯಾಕ್ಸಿನೇಷನ್ ವೇಗ ನೀಡಬೇಕು ಎಂದು ಅವರು ಸಭೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.
ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿದ ಗ್ರೇಡ್ 2 ತಹಶೀಲ್ದಾರ್
“ಜುಲೈ 4 ರಿಂದಲೇ ದೇಶದಲ್ಲಿ ಕೊರೊನಾ 3ನೇ ಅಲೆ ಆರಂಭ”
ಎಚ್ಚರ… ಆಗಸ್ಟ್ 10ರ ವೇಳೆಗೆ ಭಾರತದಲ್ಲಿ 12.6 ಲಕ್ಷ ಕೋವಿಡ್ ಕೇಸ್ – 3ನೇ ಅಲೆ ಬಗ್ಗೆ ಶಾಕಿಂಗ್ ವಿಚಾರ ಬಹಿರಂಗ..!
ಐಬಿಪಿಎಸ್ – ಗುಮಾಸ್ತರ ಹುದ್ದೆಗೆ 5830 ಆನ್‌ಲೈನ್ ಅರ್ಜಿ ಆಹ್ವಾನ
ಸೆಪ್ಟೆಂಬರ್ 12 ರಂದು ನೀಟ್ ಪರೀಕ್ಷೆ – ಧರ್ಮೇಂದ್ರ ಪ್ರಧಾನ್ ಪ್ರಕಟ