ಕೊರೊನಾ ಸಂಕಷ್ಟ – ಈ ಬಾರಿಯೂ ಕನ್ವರ್ ಯಾತ್ರೆ ರದ್ದು
ಉತ್ತರಖಂಡ : ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಮತ್ತೊಂದೆಡೆ ಕೋವಿಡ್ 2ನೇ ಅಲೆ ಮುಗಿತು ಅನ್ನೋ ಅಷ್ಟ್ರಲ್ಲಿ 3ನೇ ಅಲೆ ಎಚ್ಚರಿಕೆ ಸಿಕ್ಕಿದೆ.. ಈ ನಡುವೆ ಕೋವಿಡ್ 3ನೇ ಅಲೆ ಹಾಗೂ ಡೆಲ್ಟಾ ಪ್ಲಸ್ ಕೊರೊನಾ ಪ್ರಕರಣಗಳ ಹರಡುವಿಕೆ ತಡೆಗೆ ಈ ಬಾರಿ ಕನ್ವರ್ ಯಾತ್ರೆ ರದ್ದುಗೊಳಿಸಲು ಉತ್ತರಾಖಂಡ ಸರ್ಕಾರ ತೀರ್ಮಾನಿಸಿದೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಂಗಳವಾರ ಸಂಜೆ ಸಭೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ನೆರೆ ರಾಜ್ಯಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ. ಕೊರೊನಾ ಸೋಂಕಿನಿಂದ ತತ್ತರಿಸಿರುವ ಹಾಗೂ ಡೆಲ್ಟಾ ಪ್ಲಸ್ ಕೊರೊನಾ ರೂಪಾಂತರ ಆತಂಕ ಎದುರಾಗಿರುವ ಈ ಸಮಯದಲ್ಲಿ ಯಾತ್ರೆ ರದ್ದು ಮಾಡುವುದು ಅನಿವಾರ್ಯವಾಗಿದೆ. ಈಗಾಗಲೇ ಉತ್ತರಾಖಂಡದಲ್ಲಿ ಡೆಲ್ಟಾ ಪ್ಲಸ್ ಪ್ರಕರಣ ಪತ್ತೆಯಾಗಿದ್ದು, ಇಂಥ ಪರಿಸ್ಥಿತಿಯಲ್ಲಿ ಯಾತ್ರೆ ನಡೆಸುವುದು ಸೂಕ್ತವಲ್ಲ. ಜನರ ಪ್ರಾಣವೇ ನಮ್ಮ ಆದ್ಯತೆಯಾಗಿದೆ. ಜನರ ಜೀವದ ಜೊತೆ ಆಟವಾಡಲು ಸಾಧ್ಯವಿಲ್ಲ ಎಂದು ಕನ್ವರ್ ಯಾತ್ರೆ ರದ್ದು ನಿರ್ಧಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯ ಅವರು ತಿಳಿಸಿದ್ದಾರೆ.
ಅಲ್ಲದೇ ಕನ್ವರ್ ಯಾತ್ರೆ ನಮ್ಮ ಸಂಸ್ಕೃತಿಯ ಭಾಗ. ಆದರೆ ಜನರ ಆರೋಗ್ಯದ ದೃಷ್ಟಿಯಿಂದ ಈ ಯಾತ್ರೆಗೆ ಅನುಮತಿ ನೀಡಬಾರದು ಎಂದು ಭಾರತೀಯ ವೈದ್ಯಕೀಯ ಸಂಸ್ಥೆ ಈಚೆಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಪತ್ರ ಬರೆದಿತ್ತು. ಯಾತ್ರೆಗೆ ಅವಕಾಶ ಮಾಡಿಕೊಟ್ಟರೆ ಕೊರೊನಾ ಮೂರನೇ ಅಲೆಗೆ ಆಮಂತ್ರಣ ನೀಡಿದಂತೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು.