ಮಂಗಳೂರು : ಮಂಶಾಸಕ ಸ್ಥಾನ ಶಾಶ್ವತವಲ್ಲ, ಮನುಷ್ಯತ್ವೇ ಮುಖ್ಯ : ಯು.ಟಿ ಖಾದರ್ಗಳೂರಿನಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ ಘಟನೆಯನ್ನು ಅಮಾನವೀಯ ಎಂದು ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ಖಂಡಿಸಿದ್ದಾರೆ.
ಗುರುವಾರ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ಮಹಿಳೆಯ ಅಂತ್ಯ ಸಂಸ್ಕಾರ ಮಾಡಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಜನರ ಈ ನಡೆಗೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತಾಗಿ ಪ್ರತಿಕ್ರಿಯಿಸಿದ ಶಾಸಕ ಯು.ಟಿ ಖಾದರ್, ಮೃತ ಶರೀರದೊಂದಿಗೆ ಅಮಾನವೀಯವಾಗಿ ವರ್ತಿಸುವುದು ಪೈಶಾಚಿಕ ಎಂದಿದ್ದಾರೆ.
“ಈ ಘಟನೆ ನಾಗರಿಕ ಸಮಾಜಕ್ಕೆ ಕಪ್ಪು ಚುಕ್ಕೆ. ಮೃತ ಶರೀರರದ ಜೊತೆ ಕಠೋರವಾಗಿ ವರ್ತಿಸಿ ಅಂತ ಯಾವ ಧರ್ಮವೂ ಹೇಳಿಲ್ಲ. ಅದರಲ್ಲೂ ಶಾಸಕರೇ ಮುಂದೆ ನಿಂತು ಪ್ರತಿಭಟಿಸಿದ್ದು ಆಶ್ಚರ್ಯ ಆಗ್ತಿದೆ. ಶಾಸಕ ಸ್ಥಾನ ಶಾಶ್ವತವಲ್ಲ, ಮನುಷ್ಯತ್ವೇ ಮುಖ್ಯ ಎಂದ ಖಾದರ್, ಶಾಸಕರ ಮನುಷ್ಯತ್ವ ಇಲ್ಲದ ವರ್ತನೆಯನ್ನ ಖಂಡಿಸಿದರು.
ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊರೊನಾ ಆಕ್ಷನ್ ಪ್ಲಾನ್ ನಲ್ಲಿ ಅಂತ್ಯ ಸಂಸ್ಕಾರದ ಬಗ್ಗೆಯೂ ಯೋಚಿಸಬೇಕು. ಜಿಲ್ಲಾಡಳಿತ ಈ ವಿಚಾರದಲ್ಲಿ ವಿಫಲವಾಗಿದೆ, ಇದು ರಾಜ್ಯದ ಬೇರೆ ಕಡೆ ಆಗಬಾರದು. ಆರೋಗ್ಯ ಸಚಿವರು, ಕಂದಾಯ ಸಚಿವರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದಿದ್ದಾರೆ ಯು.ಟಿ ಖಾದರ್.








