ಡಿಸೆಂಬರ್ ವರೆಗೂ ಜಿಲ್ಲಾ & ತಾಲೂಕು ಪಂಚಾಯಿತ್ ಚುನಾವಣೆ elections ಇಲ್ಲ
ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಡಿಸೆಂಬರ್ ವರೆಗೂ ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸದಿರಲು ಸರ್ಕಾರ ನಿರ್ಧರಿಸಿದೆ.
ಇಂದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಈ ಚುನಾವಣೆಗಳ ಬಗ್ಗೆ ಚರ್ಚೆ ನಡೆದಿದ್ದು, ಡಿಸೆಂಬರ್ತನಕ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮಾಡದಿಸಿರುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಿಸಿದ್ದಾರೆ.
ಜಿ.ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಅವಧಿ ಫೆಬ್ರವರಿಗೆ ಅಂತ್ಯವಾಗಿತ್ತು. ಚುನಾವಣೆ ಸಂಬಂಧ ಆಕಾಂಕ್ಷಿಗಳು ಸಾಕಷ್ಟು ನಿರೀಕ್ಷೆ ಇಟ್ಟಿದ್ದರು. ಇದೀಗ ಡಿಸೆಂಬರ್ ವರೆಗೆ ಚುನಾವಣೆ ಮುಂದೂಡಿದ್ದು ಆಕಾಂಕ್ಷಿಗಳಲ್ಲಿ ನಿರಾಸೆ ಮೂಡಿಸಿದಂತಾಗಿದೆ.
ಅಂದಹಾಗೆ ಈ ಹಿಂದೆ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡುತ್ತಾ, ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯನ್ನು ಡಿಸೆಂಬರ್ ವರೆಗು ನಡೆಸುವುದಿಲ್ಲ ಎಂದಿದ್ದರು.