ಕೊರೊನಾ ರಿಪೋರ್ಟ್ Corona Report : ಕಳೆದ 24 ಗಂಟೇಲಿ 38,949 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 38,949 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದು, 542 ಮಂದಿ ಸೋಂಕಿತರ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ದೇಶದಾದ್ಯಂತ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,10,26,829ಕ್ಕೆ ಏರಿದ್ದು, ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 4,12,531 ಕ್ಕೆ ಬಂದು ನಿಂತಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 40,026 ಜನರು ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೂ 3,01,83,876 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ 4,30,422 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಕಳೆದ 24ಗಂಟೆಯಲ್ಲಿ 38,78,078 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ. ದೇಶದಲ್ಲಿ ಈವರೆಗೆ 39,53,43,767 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.










