ಮುಂಬೈನಲ್ಲಿ ವರುಣನ ರೌದ್ರಾವತಾರ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
ಮುಂಬೈ: ಮಾಯಾನಗರಿ ಮುಂಬೈನಲ್ಲಿ ಧಾರಾಕಾರ ಮಳೆಗೆ ಇಲ್ಲಿಯವರೆಗೂ 25 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ.. ಮುಂಬೈನಲ್ಲಿ ಶನಿವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚೆಂಬೂರ್ ಹಾಗೂ ವಿಕ್ರೋಲಿಯದಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ದುರಂತಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಸಂತಾಪ ಸೂಚಿಸಿದ್ದಾರೆ.
ಅಲ್ಲದೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಗೋಡೆ ಕುಸಿತದಿಂದಾಗಿ 25 ಮಂದಿ ಮೃತಪಟ್ಟಿದ್ದು, ಭಾರಿ ಮಳೆಯಿಂದಾಗಿ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.. ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಹೀಗೆಯೇ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ..