ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶಿಖರ್ ಧವನ್ ಹೆಸರಿಗೆ ಸೇರಿಕೊಂಡಿವೆ ಈ ಮೂರು ವಿಶೇಷ ದಾಖಲೆಗಳು…!

admin by admin
July 19, 2021
in Newsbeat, Sports, ಕ್ರೀಡೆ
SHIKHAR DHAWAN SAAKSHATV TEAM INDIA
Share on FacebookShare on TwitterShare on WhatsappShare on Telegram

ಶಿಖರ್ ಧವನ್ ಹೆಸರಿಗೆ ಸೇರಿಕೊಂಡಿವೆ ಈ ಮೂರು ವಿಶೇಷ ದಾಖಲೆಗಳು…!

SHIKHAR DHAWAN SAAKSHATV TEAM INDIAಶಿಖರ್ ಧವನ್ ನಾಯಕತ್ವದ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದೆ. ನಾಯಕನ ಜವಾಬ್ದಾರಿಗೆ ತಕ್ಕಂತೆ ಧವನ್ ಬ್ಯಾಟಿಂಗ್ ನಡೆಸಿದ್ರು. ಇನ್ನೊಂದೆಡೆ, ಪೃಥ್ವಿ ಶಾ ಮತ್ತು ಇಶಾನ್ ಕಿಶಾನ್ ತಮ್ಮ ಅಬ್ಬರದ ಬ್ಯಾಟಿಂಗ್ ಮೂಲಕ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದ್ದರು.
ಈ ನಡುವೆ ಶಿಖರ್ ಧವನ್ ತನ್ನ ನಾಯಕತ್ವದ ಮೊದಲ ಪಂದ್ಯದಲ್ಲೇ ಮೂರು ದಾಖಲೆಗಳಿಗೆ ಪಾತ್ರರಾಗಿದ್ದಾರೆ.
ಹಾಗಿದ್ರೆ ಮೊದಲ ದಾಖಲೆ ಏನು ಗೊತ್ತಾ.. ಮೊದಲನೆಯದ್ದು, ಟೀಮ್ ಇಂಡಿಯಾ ಪರ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದ ಅತೀ ಹಿರಿಯ ಆಟಗಾರನಾಗಿ ಶಿಖರ್ ಧವನ್ ಹೊರಹೊಮ್ಮಿದ್ದಾರೆ. ಧವನ್ ತನ್ನ 35ನೇ ಹರೆಯದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ರು. ಈ ಹಿಂದೆ 1984ರಲ್ಲಿ ಮೊಹಿಂದರ್ ಅಮರನಾಥ್ ಅವರು ತನ್ನ 34ರ ಹರೆಯದಲ್ಲಿ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಿದ್ದರು. ಬಳಿಕ ಸೈಯ್ಯದ್ ಕೀರ್ಮಾನಿ ಮತ್ತು ಅಜೀತ್ ವಾಡೇಕರ್ ಅವರು ತಮ್ಮ 33ರ ಹರೆಯದಲ್ಲಿ ಭಾರತ ತಂಡದ ಕ್ಯಾಪ್ಟನ್ ಆಗಿದ್ದರು.
ಇನ್ನು ಎರಡನೇ ದಾಖಲೆ ಏನು ಅಂದ್ರೆ, ಶಿಖರ್ ಧವನ್ ಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಜೇಯ 86 ರನ್ ಗಳಿಸಿದ್ದರು. ಅಲ್ಲದೆ ತಂಡವನ್ನು ಗೆಲುವಿನ ದಡವನ್ನು ಕೂಡ ಸೇರಿಸಿದ್ದರು. ಈ ನಡುವೆ ಶಿಖರ್ ಧವನ್ ಅವರು 17 ರನ್ ಗಳಿಸಿದ್ದಾಗ ಶ್ರೀಲಂಕಾ ಪರ ಒಂದು ಸಾವಿರ ರನ್ ದಾಖಲಿಸಿದ್ದ ಹಿರಿಮೆಗೂ ಪಾತ್ರರಾದ್ರು. ಲಂಕಾ ವಿರುದ್ಧ 17ನೇ ಪಂದ್ಯದಲ್ಲಿ ಧವನ್ ಈ ಸಾಧನೆ ಮಾಡಿದ್ದಾರೆ. ಅಲ್ಲದೆ ನಾಲ್ಕು ಶತಕ ಹಾಗೂ ಐದು ಶತಕಗಳನ್ನು ದಾಖಲಿಸಿದ್ದಾರೆ. ಭಾರತದ ಪರ ಲಂಕಾ ವಿರುದ್ಧ ಒಂದು ಸಾವಿರಕ್ಕಿಂತ ಅಧಿಕ ರನ್ ದಾಖಲಿಸಿದ್ದ 12ನೇ ಆಟಗಾರನಾಗಿ ಹೊರಹೊಮ್ಮಿದ್ದಾರೆ.
SHIKHAR DHAWAN SAAKSHATV TEAM INDIAಇನ್ನು ಮೂರನೇ ದಾಖಲೆ ಏನು ಅಂದ್ರೆ, ಏಕದಿನ ಕ್ರಿಕೆಟ್ ನಲ್ಲಿ ಆರು ಸಾವಿರ ರನ್ ಪೂರೈಸಿದ್ದ ಭಾರತದ ಹತ್ತನೇ ಆಟಗಾರನಾಗಿದ್ದಾರೆ ಶಿಖರ್ ಧವನ್. ಮೊದಲ ಏಕದಿನ ಪಂದ್ಯದಲ್ಲಿ ಧವನ್ 23 ರನ್ ಗಳಿಸಿದ್ದಾಗ ಈ ಸಾಧಕರ ಸಾಲಿಗೆ ಸೇರಿಕೊಂಡಿದ್ದಾರೆ. ಧವನ್ 143 ಏಕದಿನ ಪಂದ್ಯಗಳಲ್ಲಿ 6063 ರನ್ ಕಲೆ ಹಾಕಿದ್ದಾರೆ. ಇದ್ರಲ್ಲಿ 17 ಶತಕ ಹಾಗೂ 33 ಅರ್ಧಶತಕಗಳಿವೆ.
ಇದಕ್ಕು ಮೊದಲು ಭಾರತರ ಪರ ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಮಹಮ್ಮದ್ ಅಜರುದ್ದೀನ್, ಮಹೇಂದ್ರ ಸಿಂಗ್ ಧೋನಿ, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಂತರ ಶಿಖರ್ ಧವನ್ ಸ್ಥಾನ ಪಡೆದುಕೊಂಡಿದ್ದಾರೆ.
ಒಟ್ಟಿನಲ್ಲಿ ಶಿಖರ್ ಧವನ್ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಈ ಮೂರು ದಾಖಲೆಗಳನ್ನು ಬರೆದಿದ್ದಾರೆ.

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026
Tags: #Ishan Kishan#Prithvi Shaw#saakshatvbcciCricketdelhi capitalsdhawanICCShikhar DhawanSportsSri Lankateam india
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram