ಜುಲೈ 26 ರಿಂದ SSLC, ಪದವಿ ಪೂರ್ವ ಕಾಲೇಜುಗಳ ತರಗತಿ ಆರಂಭ
ಪಂಜಾಬ್ : ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಈ ನಡುವೆ ಕೋವಿಡ್ ಸೋಂಕಿನ ಎರಡನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಸೋಮವಾರ ಅಂದ್ರೆ ಜುಲೈ 26 ರಿಂದ ಎಸ್ ಎಸ್ ಎಲ್ ಸಿ ಹಾಗೂ ಪದವಿ ಪೂರ್ವ ಕಾಲೇಜುಗಳ ಭೌತಿಕ ತರಗತಿಗಳನ್ನು ಪುನರಾರಂಭಿಸುವಂತೆ ಪಂಜಾಬ್ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಈ ಆದೇಶ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ದರ ಇಳಿಕೆಯಾಗಿದ್ದು, ಎಸ್ ಎಸ್ ಎಲ್ ಸಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳ ಭೌತಿಕ ತರಗತಿಗಳನ್ನು ಪುನರಾರಂಭಿಸಬಹುದೆಂದು ಆದೇಶಿಸಿದ್ದಾರೆ.
ಆದರೇ, ಶಾಲಾ ಕಾಲೇಜುಗಳ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಎರಡೂ ಡೋಸ್ ಲಸಿಕೆಗಳನ್ನು ಪಡೆದಿರಬೇಕು ಎಂದು ಸೂಚಿಸಲಾಗಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೇ, ಉಳಿದ ತರಗತಿಗಳನ್ನೂ ಕೂಡ ಆಗಸ್ಟ್ 2 ರಿಂದ ಪುನರಾಂಭಿಸಬಹುದು ಎಂದು ಅಮರಿಂದರ್ ಸಿಂಗ್ ಅವರು ಹೇಳಿದ್ದಾರೆ. ಇನ್ನು, ರಾಜ್ಯ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸಂಗೀತ ರಸ ಸಂಜೆ ಹಾಗೂ ಲಲಿತ ಕಲೆಗಳ ಪ್ರದರ್ಶನ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡವುದಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದಿದ್ದಾರೆ.