ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಮತ್ತೆ 15 ಜನರಿಗೆ ಕೊರೊನಾ ವೈರಸ್ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 489 ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬಿಡುಗಡೆ ಮಾಡಿರುವ ಹೆಲ್ತ್ ಬುಲಿಟಿನ್ ನಲ್ಲಿ ಇಂದು ಹೊಸದಾಗಿ 15 ಜನರಿಗೆ ಕೊರೊನಾ ವೈರಸ್ ಸೋಂಕು ದೃಢವಾಗಿದೆ ಎಂದು ತಿಳಿಸಿದೆ.
ಇಂದು ಬೆಂಗಳೂರಿನಲ್ಲಿ 6 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ, ಬೆಳಗಾವಿ -06, ಮಂಡ್ಯ -01, ಚಿಕ್ಕಬಳ್ಳಾಪುರ-01, ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಕೊರೊನಾ ಪ್ರಕರಣಗಳು ದೃಢವಾಗಿವೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 489 ಕ್ಕೆ ಏರಿಕೆಯಾಗಿದೆ.
ಇನ್ನು ಬೆಂಗಳೂರಿನ 6 ಮಂದಿ ಸೋಂಕಿತರ ಪೈಕಿ ಐವರಿಗೆ ಬಿಹಾರಿ ಮೂಲದ ಕಾರ್ಮಿಕನಿಂದಲೇ ಸೋಂಕು ತಗುಲಿದೆ.








